Saturday, February 22, 2025
Menu

ಸಿಎಂ ಸಹನಾ ಶಕ್ತಿ ಕಳೆದುಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ

basavaraj bommai

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ಬಜೆಟ್ ಖರ್ಚು ವೆಚ್ಚದ ಬಗ್ಗೆ ಕೇಳಿದರೆ, ಕೇಂದ್ರದ ಕಡೆಗೆ ಬೆರಳು ಮಾಡುತ್ತಾರೆ. ಅದನ್ನು ನೋಡಿದರೆ, ಅವರು ಸಹನಾ ಶಕ್ತಿ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ‌ಮಾತನಾಡಿದ ಅವರು, ನಾನು ಒಬ್ಬ ಸಾಮಾನ್ಯ ಪ್ರಜೆಯಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು ಎಂದು ಸಲಹೆ ನೀಡಿದರೆ, ಅದಕ್ಕೂ ಅವರಿಗೆ ಆಪತ್ತಿದೆ ಎಂದರೆ ಅವರ ಸಹನಾ ಶಕ್ತಿ ಕಳೆದುಕೊಂಡಿದ್ದಾರೆ. ನಾವು ರಾಜ್ಯದ ಬಜೆಟ್ ಬಗ್ಗೆ ಮಾತನಾಡಿದರೆ, ಕೇಂದ್ರದ ಬಜೆಟ್ ಬಗ್ಗೆ ಮಾತನಾಡುತ್ತಾರೆ. ರಾಜ್ಯದ ಬಜೆಟ್ ಬಗ್ಗೆ ಸಂಪೂರ್ಣ ವಿವರ ಕೊಡಬೇಕು. ಕಳೆದ ವರ್ಷ ಯಾವುದಕ್ಕೆ ಎಷ್ಟು ಹಣ ಇಟ್ಟಿದ್ದರು, ಎಷ್ಟು ಖರ್ಚಾಗಿದೆ ಎನ್ನುವುದನ್ನು ಮಾಹಿತಿ ನೀಡಬೇಕು. ನಾನಿದ್ದಾಗ ಪೂರಕ ಬಜೆಟ್ ಮಂಡನೆ ಮಾಡಿದ್ದೆ, ಇವರು ಬಂದ ಮೇಲೆ ಎರಡು ವರ್ಷದಿಂದಲೂ ಕೊರತೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ನಾವಿದ್ದಾಗ 77 ಸಾವಿರ ಕೋಟಿ ಸಾಲ ಪಡೆದು ಅದರಲ್ಲಿ ಅತಿ ಹೆಚ್ಚು ಬಂಡವಾಳ ವೆಚ್ಚ ಮಾಡುತ್ತಿದ್ದೇವು. ಕಾಂಗ್ರೆಸ್ ಅವಧಿಯಲ್ಲಿ ಬಂಡವಾಳ ವೆಚ್ಚ ಹೆಚ್ಚಾಗಿಲ್ಲ ಸಾಲ ಹೆಚ್ಚಾಗಿದೆ. 1.5 ಲಕ್ಷ ಕೋಟಿ ಸಾಲ ಎರಡೂ ವರ್ಷ ಮಾಡಿದ್ದಾರೆ. ಕಳೆದ ವರ್ಷ 15 ಸಾವಿರ ಕೋಟಿ ಸಾಲ ಹೆಚ್ಚುವರಿಯಾಗಿ ಮಾಡಿದ್ದಾರೆ. ಸಾಲದ ಶೂಲಕ್ಕೆ ತಳ್ಳುತ್ತಿರುವ ಬಗ್ಗೆ ಕೇಳಿದರೆ ಅದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಾರೆ. ಅವರದೇ ನೆಚ್ಚಿನ ಗ್ಯಾರೆಂಟಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿಲ್ಲ ಎಂದರೆ ಅವರ ಆರ್ಥಿಕ ಪರಿಸ್ಥಿತಿ ದಿವಾಳಿಗೆ ಅದೇ ಉತ್ತರ ಎಂದರು‌.

ಸರ್ಕಾರದ ವಿರುದ್ಧ ಹೋರಾಟ

ಎಸ್ ಪಿಟಿಪಿಎಸ್ ಹಣ ಕಳೆದ ಎರಡು ವರ್ಷಗಳಿಂದ ದುರ್ಬಳಕೆ ಆಗುತ್ತಿದೆ. ಎಸ್ಸಿಪಿ ಟಿಎಸ್ ಪಿ ಗೆ ಬಜೆಟ್ ನಲ್ಲಿ ಮೀಸಲಿರಿಸಿದ್ದ 25 ಸಾವಿರ ದಷ್ಟು ಹಣ ಬೇರೆ ಬೇರೆ ಯೋಜನೆಗೆ ಬಳಕೆ ಆಗಿದೆ. ಅಭಿವೃದ್ಧಿಗೆ ಹಣ ಕೊರತೆ ಆಗಿದೆ. ಇದರ ಜೊತೆಗೆ ಸಮಾಜ ಕಲ್ಯಾಣ ಇಲಾಖೆಗೆ ಬರುವ ಹಣ ಸಹ ಬಿಡುಗಡೆ ಆಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಬಗ್ಗೆ ಸಾಕಷ್ಟು ಮಾತನಾಡುತ್ತಾರೆ. ಓಬಿಸಿ, ಎಸ್ ಸಿ. ಎಸ್ ಟಿ ಹಾಗೂ ಇತರ ಜನಸಾಮಾನ್ಯರ ಕಲ್ಯಾಣ ಅನುದಾನ ಬಿಡುಗಡೆ ಆಗಿಲ್ಲ.

ವಾಲ್ಮೀಕಿ ನಿಗಮದ ಹಗರಣ ಆದ ನಂತರ ಆ ಇಲಾಖೆಯಲ್ಲಿ ಏನು ಆಗುತ್ತಿದೆ. ಇಲಾಖೆಯ ಅನುದಾನ ಏನಾಗಿದೆ. ಯಾವ ಉದ್ದೇಶಕ್ಕೆ ಬಳಕೆ ಆಗಿದೆ. ಎಷ್ಟು ಉಳಿದಿದೆ, ಎಷ್ಟು ಹಣ ಬಳಕೆ ಆಗಿದೆ ಗೊತ್ತಿಲ್ಲ. ಎಸ್ ಸಿ ಹಾಗೂ ಎಸ್ ಟಿ ಜನರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡತಾ ಇದ್ದಾರೆ. ಇದರ ವಿರುದ್ಧ ಹೋರಾಟ ನಡೆಸಲಾಗುವುದು. ಜನರ ಬಳಿ ತೆಗೆದುಕೊಂಡು ಹೋಗಲಾಗುತ್ತಿದೆ. ಶೀಘ್ರದಲ್ಲೇ ನಮ್ಮ ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಿ ಹೋರಾಟದ ದಿನಾಂಕ ಪ್ರಕಟ ಮಾಡಲಾಗುವುದು. ಬಜೆಟ್ ಮುನ್ನ ಹೋರಾಟ ಮಾಡುವ ವಿಚಾರ ಸಹ ಇದೆ ಎಂದು ಹೇಳಿದರು.

ತಮ್ಮ ಬಗ್ಗೆ ಸಚಿವ ದಿನೇಶ್ ಗುಂಡೂರಾವ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಚಿವ ದಿನೇಶ್ ಗುಂಡೂರಾವ್ ಗೆ ಕೊಟ್ಟ ಆರೋಗ್ಯ ಇಲಾಖೆ ಸರಿ ಮಾಡಲಿ. ನಾವು ಪಿಎಚ್ ಸಿ ಗಳನ್ನ ಉನ್ನತೀಕರಣಕ್ಕೆ ಏರಿಸಿದ್ದೇವೆ. ನಮ್ಮ ಕ್ಲೀನಕ್ ತೆರೆದವು

ನಾಲ್ಕು ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಿದೆವು. ಆರೋಗ್ಯ ಇಲಾಖೆಗೆ ಸಾಕಷ್ಟು ಅನುದಾನ ಕೊಟ್ಡಿದ್ದೇವು. ಇಂದು ಆರೋಗ್ಯ ಇಲಾಖೆ ಅತ್ಯಂತ ಕ್ಷೀಣ ಸ್ಥಿತಿಯಲ್ಲಿ ಇದೆ ಎಂದು ತಿರುಗೇಟು ನೀಡಿದರು.

Related Posts

Leave a Reply

Your email address will not be published. Required fields are marked *