Wednesday, August 20, 2025
Menu

ಉಭಯ ಸದನಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಒಳ ಮೀಸಲಾತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

siddaramiah

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳ ಮೀಸಲಾತಿ ಕುರಿತು ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಉಭಯ ಸದನಗಳಲ್ಲಿ ಘೋಷಿಸಿದರು. ಅಲ್ಲದೇ ಮುಂದಿನ ದಿನಗಳಲ್ಲಿ ಬದಲಾವಣೆ ಮಾಡುವ ಸುಳಿವು ನೀಡಿದರು.

ವಿಧಾನಸಭೆ ಅಧಿವೇಶನದಲ್ಲಿ ಬುಧವಾರ ಮಾತನಾಡಿದ ಅವರು, ಎಸ್​ ಸಿ ಬಲಗೈ ಹಾಗೂ ಎಡಗೈ ಸಮುದಾಯಗಳಿಗೆ ಸಮಾನವಾಗಿ ಶೇ.6ರಷ್ಟು ಮೀಸಲಾತಿ. ಉಳಿದ ಜಾತಿಗಳನ್ನು ಇತರೆ ಎಂದು ಪರಿಗಣಿಸಿ ಶೇ.5ರಷ್ಟು ಒಳಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ ಎಂದರು.

ನ್ಯಾ.ನಾಗಮೋಹನ್‌ ದಾಸ್ ವರದಿಯ ಶಿಫಾರಸುಗಳನ್ನು ಕೆಲ ಮಾರ್ಪಾಡುಗಳೊಂದಿಗೆ ಒಳ ಮೀಸಲಾತಿ ಕಲ್ಪಿಸಲಾಗಿದೆ. A, B, C ಎಂದು ವರ್ಗೀಕರಣ ಮಾಡಿ ಮೀಸಲಾತಿ ಹಂಚಲಾಗಿದ್ದು, ಒಳ ಮೀಸಲಾತಿ ಹೋರಾಟದ ಮೊಕದ್ದಮೆ ಹಿಂಪಡೆಯಲೂ ತೀರ್ಮಾನಿಸಲಾಗಿದೆ. ಈ ಮೂಲಕ ದಶಗಳ ಹೋರಾಟಕ್ಕೆ ನಮ್ಮ ಸರ್ಕಾರ ನ್ಯಾಯ ಒದಗಿಸಿದೆ ಎಂದರು.

ಏನಾದರೂ ಬದಲಾವಣೆ ಮಾಡಬೇಕಾದ್ರೆ ಮುಂದಿನ ಹಂತದಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಹೇಳುತ್ತಿದ್ದಂತೆಯೇ ಆಡಳಿತ ಪಕ್ಷದ ಸದಸ್ಯರು ಮೇಜು ತಟ್ಟಿ ಸ್ವಾಗತಿಸಿದರು. ಬಳಿಕ ವಿಪಕ್ಷ ಬಿಜೆಪಿ ಸದಸ್ಯರು ಮಾತನಾಡಲು ಮುಂದಾದರು. ಆದ್ರೆ, ಇದಕ್ಕೆ ಸ್ಪೀಕರ್ ಯುಟಿ ಖಾದರ್, ಈಗ ಮಾತನಾಡುವುದು ಬೇಡ ಎಂದು ಅವರಕಾಶ ಕೊಡಲಿಲ್ಲ. ಬಳಿಕ ಮಾತು ಮುಂದುವರಿಸಿದ ಸಿಎಂ, ನಿಮ್ಮ ಕೈಯಲ್ಲಿ ಮಾಡಲು ಆಗಿಲ್ಲ ಅಂತಾನೇ ನಾವು ಮಾಡಿದ್ದೇವೆ. ನಿಮ್ಮ ಕಂಡರೆ ಭಯ ಇಲ್ಲ ಎಂದು ಬಿಜೆಪಿಯವರಿಗೆ ಕೌಂಟರ್ ಕೊಟ್ಟರು.

ಮೀಸಲಾತಿ ಜಾರಿ ಬಗ್ಗೆ ಚರ್ಚೆಗೆ ವಿಪಕ್ಷ ಪಟ್ಟು

ಇನ್ನು ಸಿಎಂ ಮಾತು ಮುಗಿಯುತ್ತಿದ್ದಂತೆಯೇ ವಿಪಕ್ಷ ನಾಯಕ ಆರ್ ಅಶೋಕ್ ಎದ್ದು ನಿಂತು ಮೀಸಲಾತಿ ಜಾರಿ ಬಗ್ಗೆ ಮಾತನಾಡಲು ಪಟ್ಟು ಹಿಡಿದರು. ಈಗ ಚರ್ಚೆ ಮಾಡಲು ಅವಕಾಶ ಇಲ್ಲ. ಸಿಎಂ ವಾಕೌಟ್ ಮಾಡಿಲ್ಲ. ವಿಧಾನ ಪರಿಷತ್ತಿನಲ್ಲಿ ಉತ್ತರ ಇದೆ. ಹೀಗಾಗಿ ಅಲ್ಲಿಗೆ ಹೋಗಿದ್ದಾರೆ ಎಂದು ಸ್ಪೀಕರ್ ಹೇಳಿದರು. ಈ ವೇಳೆ ಪ್ರಶ್ನೆಗೆ ಅವಕಾಶ ಇದೆ ಎಂದು ಬಿಜೆಪಿ ಸದಸ್ಯ ಸುನಿಲ್ ಕುಮಾರ್ ನಿಯಮದ ಪುಸ್ತಕ ಓದಿದರು. ಪ್ರಶ್ನೆ ಕೇಳಲು ಅವಕಾಶ ಇಲ್ಲ ಅಂದರೆ ಸರ್ಕಾರ ಏನೋ ಮುಚ್ಚಿಡಲು ಮುಂದಾಗಿದೆ. ಸಿಎಂ ಇಲ್ಲ ಅಂದರೆ ನಮಗೆ ಡಿಕೆ ಶಿವಕುಮಾರ್ ಸಿಎಂ .ಅವರಿಗೆ ಕೊಡುತ್ತೇವೆ. ಅನುಮತಿ ಕೊಡಿ ಎಂದು ವಿಪಕ್ಷ ನಾಯಕ ಅಶೋಕ್ ಪಟ್ಟು ಹಿಡಿದರು.

ಬದಲಾವಣೆ ಸುಳಿವು ನೀಡಿದ ಸಿಎಂ

ಎಡಗೈ ಜೊತೆ ಬಲಗೈ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿ ಕಲ್ಪಿಸಿ ಸರ್ಕಾರ ಎಚ್ಚರಿಕೆ ಇಟ್ಟಿದೆ. ಆದ್ರೆ ಲಂಬಾಣಿ, ಬೋವಿ, ಅಲೆಮಾರಿ ಸೇರಿ 60 ಪರಿಶಿಷ್ಟ ಜಾತಿಗಳಿಗೆ ಶೇ.5ರಷ್ಟು ಮೀಸಲಾತಿ ನೀಡಿರುವುದು ಹೊಸ ಸಂಘರ್ಷಕ್ಕೆ ನಾಂದಿಹಾಡಿದೆ.  ಇನ್ನು ಒಳಮೀಸಲಾತಿ ಜಾರಿಗೆ ಸಂಬಂಧ ಕೆಲ ತಪ್ಪುಗಳಾಗಿವೆ ಎಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ಅಲೆಮಾರಿ ಸಮುದಾಯಕ್ಕೆ ಅನ್ಯಾಯವಾಗಿದೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಸದನದಲ್ಲಿ ಉತ್ತರಿಸುವಾಗ ಬದಲಾವಣೆ ಬಗ್ಗೆ ಮುಂದೆ ತೀರ್ಮಾನ ಮಾಡುತ್ತೇವೆ ಎಂದು ಭರವಸೆ ನೀಡಿದರು. ಈ ಮೂಲಕ ಅಲೆಮಾರಿ ಜನಾಂಗದ ಆಕ್ರೋಶ ಹೆಚ್ಚಾದರೆ ಏನಾದರೂ ಬದಲಾವಣೆ ಮಾಡುವ ಸಾಧ್ಯತೆಗಳಿವೆ.

ಪರಿಷತ್ ನಲ್ಲೂ ಒಳ ಮೀಸಲಾತಿ ಜಾರಿ ಬಗ್ಗೆ ತಿಳಿಸಿದ ಸಿಎಂ

ಇನ್ನು ಈ ಒಳಮೀಸಲಾತಿ ಬಗ್ಗೆ ವಿಧಾನಸಭೆಯಲ್ಲಿ ಉತ್ತರ ನೀಡದ ಬಳಿಕ ವಿಧಾನ ಪರಿಷತ್ ನಲ್ಲೂ ಸಹ ಪ್ರಸ್ತಾಪ ಮಾಡಿದ್ದು, ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಕುರಿತಂತೆ ಸರ್ವೋಚ್ಚ ನ್ಯಾಯಾಲಯವು ರಾಜ್ಯಗಳ ವಿವೇಚನೆಗೆ ಬಿಟ್ಟಿತ್ತು.ಒಳ ಮೀಸಲಾತಿ ವರ್ಗೀಕರಣ ರಾಜ್ಯ ಸರ್ಕಾರಗಳಿಗೆ ಸಾಂವಿಧಾನಿಕವಾಗಿ ಬಂದ ಅಧಿಕಾರ ಎಂಬುದನ್ನು ಸುಪ್ರಿಂ ಕೋರ್ಟ್ ಹೇಳಿದೆ. 11-11-2024ರಂದು ರಂದು ನ್ಯಾ. ನಾಗಮೋಹನ್ ದಾಸ್ ನೇತೃತ್ವದ ಏಕ ಸದಸ್ಯ ಆಯೋಗ ರಚನೆ ಮಾಡಲಾಯಿತು. ನಾಗಮೋಹನ್ ದಾಸ್ ಆಯೋಗ 101 ಪರಿಶಿಷ್ಟ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಿದೆ.

ಕೆಲವು ಮಾರ್ಪಾಡು ಮಾಡಿ ವರದಿಯನ್ನು ಅಂಗೀಕರಿಸಿದ್ದೇವ. ಬಲಗೈ ಸಮೂಹಕ್ಕೆ 6% ಮೀಸಲಾತಿ, ಎಡಗೈ ಸಮೂಹಕ್ಕೆ 6% ಮೀಸಲಾತಿ ಕಲ್ಪಿಸಿ ಕ್ಯಾಬಿನೆಟ್ ನಲ್ಲಿ ತೀರ್ಮಾನ ಮಾಡಿದ್ದೇವೆ. ಇನ್ನು ಸ್ಪೃಶ್ಯ ಜಾತಿಗಳಿಗೆ ಶೆ.4ರಷ್ಟು ಮೀಸಲಾತಿ ನೀಡುವ ಬಗ್ಗೆ ನಾಗಮೋಹನ್ ದಾಸ್ ಶಿಫಾರಸು‌ ಮಾಡಿದ್ದರು. ಕೆಲವು ತಾಂತ್ರಿಕ ಕಾರಣಗಳಿಂದ ಒಂದೇ ಗುಂಪಿಗೆ ಸೇರಿಸಿ ವರ್ಗ- ಸಿ ಗೆ 5% ಮೀಸಲಾತಿ ನೀಡಲು ನಿರ್ಧರಿಸಿದ್ದೇವೆ. ಸಮಾನತೆ ನ್ಯಾಯ ಸಮ್ಮತೆ ಖಚಿತಪಡಿಸಿಕೊಳ್ಳಲು ಮಾರ್ಪಾಡು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

Related Posts

Leave a Reply

Your email address will not be published. Required fields are marked *