ಚಿಂತಕ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ (63) ಮತ್ತು ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಈ ಇಬ್ಬರು ಸಮಾಜಮುಖಿ ಗಣ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
ಮುಜಾಫರ್ ಅಸ್ಸಾದಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮೈಸೂರಿನ ಸರಸ್ವತಿಪುರಂನ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ಅಸ್ಸಾದಿ ಸೇವೆ ಸಲ್ಲಿಸಿದ್ದರು. ವಿವಿಯ ಹಂಗಾಮಿ ಕುಲಪತಿಯಾಗಿ 2022ರಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು.
ನಮ್ಮೆಲ್ಲರಿಗೆ ಪ್ರೀತಿಪಾತ್ರರಾಗಿದ್ದ ಹಿರಿಯ ವಿದ್ವಾಂಸ ಮತ್ತು ಸಾಮಾಜಿಕ ಚಿಂತಕ ಪ್ರೊ.ಮುಝಾಫರ್ ಅಸ್ಸಾದಿ ಅವರ ಅನಿರೀಕ್ಷಿತ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
ಪ್ರೊ.ಅಸ್ಸಾದಿ ಕೇವಲ ಒಬ್ಬ ಪ್ರಾಧ್ಯಾಪಕ ಆಗಿರಲಿಲ್ಲ. ನಾಡಿನ ಜನಪರ ಹೋರಾಟವನ್ನು ವೈಚಾರಿಕ ಚಿಂತನೆಯ ಮಾರ್ಗದರ್ಶನದೊಂದಿಗೆ ಮುನ್ನಡೆಸಿದವರು. ಅವರ ಅಗಲಿಕೆಯಿಂದ ನಾಡು ಬಡವಾಗಿದೆ,… pic.twitter.com/YmoM3y47Wo
— Siddaramaiah (@siddaramaiah) January 4, 2025
ಉಡುಪಿ ಜಿಲ್ಲೆಯ ಶಿರ್ವ ಗ್ರಾಮದವರಾದ ಅಸ್ಸಾದಿ ಮಂಗಳೂರು ವಿವಿಯಲ್ಲಿ ಸ್ನಾತಕೋತ್ತರ ಪದವಿ, ದೆಹಲಿಯ ಜೆಎನ್ಯು ವಿವಿಯಲ್ಲಿ ಎಂ.ಫಿಲ್ ಹಾಗೂ ಪಿಹೆಚ್.ಡಿ ಪದವಿ ಪಡೆದಿದ್ದರು. ಚಿಕಾಗೊ ವಿವಿಯಲ್ಲಿ ಪೋಸ್ಟ್ ಡಾಕ್ಟೊರಲ್ ಪದವಿ ಪಡೆದಿದ್ದರು.
ಜಿ.ಸಿ.ಬಯ್ಯಾರೆಡ್ಡಿ ಅವರ ನಿಧನದದಿಂದ ದು:ಖಿತನಾಗಿದ್ದೇನೆ. ಆತ್ಮೀಯ ಸ್ನೇಹಿತರಾಗಿದ್ದ ಬಯ್ಯಾರೆಡ್ಡಿ ಭೇಟಿಯಾದಾಗೆಲ್ಲ ದೇಶದ ರೈತರು ಮತ್ತು ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಿದ್ದರು. ಈ ಸಮುದಾಯಗಳಿಗೆ ನ್ಯಾಯ ಕೊಡಿಸಲು ತಮ್ಮ ಬದುಕನ್ನು ಅರ್ಪಿಸಿಕೊಂಡಿದ್ದ ಬಯ್ಯಾರೆಡ್ಡಿಯವರು ಒಬ್ಬ ದಣಿವರಿಯದೆ ಇದ್ದ ಜನಪರ ಹೋರಾಟಗಾರ. ಅವರ ಕುಟುಂಬ ವರ್ಗ ಮತ್ತು ಹಿತೈಷಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿಎಂ ಹೇಳಿದ್ದಾರೆ.
ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ ಅವರ ನಿಧನದದಿಂದ ದು:ಖಿತನಾಗಿದ್ದೇನೆ.
ಆತ್ಮೀಯ ಸ್ನೇಹಿತರಾಗಿದ್ದ ಬಯ್ಯಾರೆಡ್ಡಿಯವರು ಭೇಟಿಯಾದಾಗೆಲ್ಲ ದೇಶದ ರೈತರು ಮತ್ತು ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಿದ್ದರು. ಈ ಸಮುದಾಯಗಳಿಗೆ ನ್ಯಾಯ ಕೊಡಿಸಲು ತಮ್ಮ ಬದುಕನ್ನು… pic.twitter.com/KGLxnpq0KJ
— Siddaramaiah (@siddaramaiah) January 4, 2025
ಬಯ್ಯಾರೆಡ್ಡಿ ಅವರ ಪಾರ್ಥೀವ ಶರೀರವನ್ನು ಸಂಜೆ 4 ಗಂಟೆಯವರೆಗೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಸಿಪಿಐ(ಎಂ) ರಾಜ್ಯ ಕಚೇರಿ ಇಎಂಎಸ್ ಭವನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.