Thursday, January 30, 2025
Menu

ಇಂದು ಅಪಘಾತಗಳಲ್ಲಿ ಮೃತಪಟ್ಟವರಿಗೆ ಸಿಎಂ ಸಂತಾಪ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸಲ್ಲಿಸಿದ್ದಾರೆ.

ಎರಡು ಅಪಘಾತಗಳಲ್ಲಿ ಒಟ್ಟು 14 ಜನ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು.  ಅಪಘಾತ ದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದೂ ಸಿಎಂ ತಿಳಿಸಿದ್ದಾರೆ. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುವುದಾಗಿ ಪ್ರಕಟಿಸಿದ್ದಾರೆ.

Related Posts

Leave a Reply

Your email address will not be published. Required fields are marked *