Menu

ಸರ್ಕಾರದಿಂದ ಎಲ್ಲಾ ಪೌರ ಕಾರ್ಮಿಕರ ಸೇವೆ ಕಾಯಂ ಎಂದ ಸಿಎಂ

ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಳಗಾವಿಯ ಟಿಳಕವಾಡಿಯಲ್ಲಿ ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು.

ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದರು.

ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 6928 ಕೋಟಿ ಮೊತ್ತದ ಕೆಲಸಗಳು ನಡೆಯುತ್ತಿವೆ ಎಂದು ಹೇಳಿದರು.

ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದರು.

Related Posts

Leave a Reply

Your email address will not be published. Required fields are marked *