Menu

ನಾಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್‌ಗೆ ಅಧಿಕಾರ?

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ವಿಚಾರದಲ್ಲಿ ನಡೆಯುತ್ತಿದ್ದ ನಾಯಕತ್ವ ಬದಲಾವಣೆಯ ಜಟಾಪಟಿ ಕೊನೆಯ ಹಂತಕ್ಕೆ ಬಂದಿದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ಗುರುವಾರ) ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ, ಈಗಾಗಲೇ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿ ಪತ್ರ ರವಾನಿಸಿದ್ದಾರೆ.

ಸಿದ್ದರಾಮಯ್ಯ ನಾಳೆ ಬೆಳಿಗ್ಗೆ 10:30ಕ್ಕೆ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ. ನಾಳೆ ಬೆಳಿಗ್ಗೆ 9 ಗಂಟೆಗೆ ಸಿಎಂ ಅವರು ತಮ್ಮ ಆಪ್ತ ಸಚಿವರು ಮತ್ತು ಶಾಸಕರಿಗಾಗಿ ಉಪಹಾರ ಕೂಟ ಆಯೋಜಿಸಿದ್ದಾರೆ. ಈ ಸಭೆಯಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಅಂತಿಮ ಮಾತುಕತೆ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಸಿದ್ದರಾಮಯ್ಯ ರಾಜೀನಾಮೆ ಕುರಿತ ಸುದ್ದಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿದೆ. ಕಾಂಗ್ರೆಸ್ ಪಕ್ಷದ ಹಲವು ನಾಯಕರು ಮೌನ ವಹಿಸಿದ್ದು, ಅಧಿಕೃತ ಘೋಷಣೆಯವರೆಗೆ ಯಾವುದೇ ಪ್ರತಿಕ್ರಿಯೆ ನೀಡಲು ಮುಂದಾಗಿಲ್ಲ.

ಡಿಕೆ ಶಿವಕುಮಾರ್ ಬೆಂಬಲಿಗರು ರಾಜಕೀಯ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದು, ಹೊಸ ಸಿಎಂ ಆಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸುವ ಸಾಧ್ಯತೆಗಳ ಕುರಿತು ಚರ್ಚೆಗಳು ಕಾವೇರಿವೆ.

Related Posts

Leave a Reply

Your email address will not be published. Required fields are marked *