ರಾಜೀನಾಮೆ ನೀಡುವ ವದಂತಿಗಳನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ನವದೆಹಲಿ: ದೆಹಲಿಯಿಂದಲೇ ವಿರೋಧಿ ಬಣಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಖಡಕ್ ಸಂದೇಶ ರವಾನಿಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹೈಕಮಾಂಡ್ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ದೆಹಲಿಗೆ ದೌಡಾಯಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಜೆ.ಪಿ. ನಡ್ಡಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ವಿಚಾರ ಶುದ್ಧ ಸುಳ್ಳು. ರಾಜೀನಾಮೆ ನೀಡುವಂತೆ ಹೈಕಮಾಂಡ್ ನನಗೆ ಸೂಚಿಸಿಲ್ಲ. ರಾಜೀನಾಮೆ ಕೇಳಿದ್ದಾರೆ ಎಂಬುದು ಸತ್ಯಕ್ಕೆ ದೂರು. ಹೀಗಾಗಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಯಡಿಯೂರಪ್ಪ ಗುಡಿಗಿದ್ದಾರೆ.

ಆಗಸ್ಟ್ ಮೊದಲ ವಾರದಲ್ಲಿ ಮತ್ತೆ ದೆಹಲಿಗೆ ಭೇಟಿ ನೀಡುತ್ತೇನೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಿದರು. ಈ ಮೂಲಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಎದ್ದಿರುವ ಚರ್ಚೆ ಊಹಾಪೋಹಗಳಿಗೆ ಸಿಎಂ ಬಿ.ಎಸ್.ವೈ. ಮತ್ತೊಮ್ಮೆ ತೆರೆ ಎಳೆದಿದ್ದಾರೆ.

,

Leave a Reply

Your email address will not be published. Required fields are marked *