Menu

ಪೆಟ್ರೋಲ್ ಡೀಸೆಲ್ ಜೊತೆ ಸಿಎನ್‌ಜಿ ಬೆಲೆ ಏರಿಕೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಬಳಿಕ ಇದೀಗ ದೇಶಾದ್ಯಂತ ಸಿಎನ್‌ಜಿ (CNG) ದರ ಪ್ರತಿ ಕೆಜಿಗೆ ಎರಡು ರೂ. ಹೆಚ್ಚಳವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹಾರ್ಮುಜ್ ಜಲಸಂಧಿಯ ದಿಗ್ಬಂಧನದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ದರ ಏರಿಕೆಯಾಗಿದೆ. ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಅಸ್ಥಿರತೆ ಮತ್ತು ರೂಪಾಯಿ ಮೌಲ್ಯ ಕುಸಿತವೇ ಈ ಬೆಲೆ ಏರಿಕೆಗೆ ಪ್ರಮುಖ ಕಾರಣವೆಂದು ಕಂಪನಿಗಳು ತಿಳಿಸಿವೆ.

ಇಂದು ಅಂದರೆ ಮೇ 15ರಂದು ಪೆಟ್ರೋಲ್ ಮತ್ತು ಡೀಸೆಲ್ ದರ ಲೀಟರ್​ಗೆ 3 ರೂ.ನ ಏರಿಕೆ ಜೊತೆಗೆ ಸಿಎನ್​ಜಿ ದರ ಕೂಡ ಹೆಚ್ಚಿದೆ. ದೆಹಲಿಯಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 77.09 ರೂ.ನಿಂದ 79.09 ರೂ. ಗೆ ಏರಿಕೆಯಾಗಿದ್ದರೆ, ಮುಂಬೈನಲ್ಲಿ ಮಹಾನಗರ ಗ್ಯಾಸ್ ಲಿಮಿಟೆಡ್ ಈಗಾಗಲೇ ದರ ಹೆಚ್ಚಳ ಮಾಡಿದ್ದು, ಅಲ್ಲಿ ಪ್ರತಿ ಕೆಜಿ ಬೆಲೆ 84 ರೂ. ತಲುಪಿದೆ.

ಸಿಎನ್‌ಜಿ ದರ ಏರಿಕೆಯು ಆಟೋ ಮತ್ತು ಟ್ಯಾಕ್ಸಿ ಚಾಲಕರ ಪಾಲಿಗೆ ಬಹುದೊಡ್ಡ ಸಂಕಷ್ಟ ತಂದೊಡ್ಡಿದೆ. ಅನಿಲದ ದರ ಹೆಚ್ಚಳದಿಂದಾಗಿ ಕೈಗೆ ಸಿಗುವ ಆದಾಯ ಕುಸಿಯುತ್ತಿದೆ. ಬಾಡಿಗೆ ದರ ಹೆಚ್ಚಿಸಿದರೆ ಜನ ಆಟೋ ಹತ್ತಲ್ಲ, ನಮಗೆ ಹೊಟ್ಟೆ ತುಂಬಲ್ಲ ಎಂಬುದು ಅವರ ಅಳಲು. ಬೆಂಗಳೂರಿನಂತಹ ನಗರಗಳಲ್ಲಿ ಈಗಾಗಲೇ ಸಿಎನ್‌ಜಿ ಕೊರತೆಯಿಂದಾಗಿ ಚಾಲಕರು ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಇತ್ತು, ದರ ಏರಿಕೆಯಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ.

Related Posts

Leave a Reply

Your email address will not be published. Required fields are marked *