Thursday, January 22, 2026
Menu

ಪುಸ್ತಕದ ರಟ್ಟಿನಲ್ಲಿ ಬಚ್ಚಿಟ್ಟಿದ್ದ 38.60 ಕೋಟಿ ಮೌಲ್ಯದ ಕೊಕೇನ್ ವಶ

drugs

ಬೆಂಗಳೂರು: ಬ್ರೆಜಿಲ್‌ನ ಸಾವೊ ಪಾಲೊದಿಂದ ಆಗಮಿಸಿದ್ದ ಪ್ರಯಾಣಿಕರೊಬ್ಬರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ 38.60 ಕೋಟಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ.

ಆದರೆ ಆರೋಪಿಯ ಗುರುತನ್ನು ಬಹಿರಂಗಪಡಿಸಿಲ್ಲ. ಜನವರಿ 21 ರಂದು ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಸಾವ್ ಪಾಲೊದಿಂದ ಆಗಮಿಸಿದ ಪ್ರಯಾಣಿಕನನ್ನು ತಡೆದು 38.60 ಕೋಟಿ ಮೌಲ್ಯದ 7.72 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಪ್ರಯಾಣಿಕನನ್ನು ಎನ್ ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ. ಈ ಕುರಿತು ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೋಸ್ಟ್ ನಲ್ಲಿ ತಿಳಿಸಲಾಗಿದೆ.

Related Posts

Leave a Reply

Your email address will not be published. Required fields are marked *