Thursday, January 30, 2025
Menu

ರಾಜ್ಯದಲ್ಲಿ ಮೂರು ದಿನ ಕಾಡಲಿದೆ ಅತಿ ಶೀತಗಾಳಿ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ತೀವ್ರವಾದ ಶೀತಗಾಳಿ ವ್ಯಾಪಿಸಲಿದ್ದು, ಉಷ್ಣಾಂಶ ಕುಸಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಶೀತಗಾಳಿ ಇರಲಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮಂಡ್ಯ ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲೂ ಶೀತ ಗಾಳಿಯಿಂದ ರಕ್ಷಣೆಗೆ ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.

ರಾಜ್ಯಾದ್ಯಂತ ಹೆಚ್ಚಾಗಿದ್ದು, ಕೆಲವೆಡೆ 15 ಡಿಗ್ರಿಗಿಂತ ಕೆಳಗೆ ತಾಪಮಾನ ಕುಸಿದಿದೆ. ಮುಂದಿನ 3 ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಕನಿಷ್ಠ ಉಷ್ಣಾಂಶ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಕುಸಿಯುವ ಸಾಧ್ಯತೆ ಇದ್ದು ಮಂಜು ಮುಸುಕಿದ ವಾತಾವರಣ ಮುಂದುವರೆಯಲಿದೆ.

ವಿಜಯಪುರ- 10.6 ಡಿ.ಸೆ, ಚಿಕ್ಕಮಗಳೂರು- 10.2 ಡಿ.ಸೆ, ಚಿಂತಾಮಣಿ- 10.8 ಡಿ.ಸೆ, ಬೀದರ್ – 11 ಡಿ.ಸೆ, ದಾವಣಗೆರೆ- 11 ಡಿ.ಸೆ, ಬೆಳಗಾವಿ – 11.4 ಡಿ.ಸೆ ಉಷ್ಣಾಂಶ ದಾಖಲಾಗಿದೆ.

Related Posts

Leave a Reply

Your email address will not be published. Required fields are marked *