ಇಸ್ರೇಲ್ ಮತ್ತು ಇರಾನ್ ಸಂಘರ್ಷ ತೀವ್ರಗೊಂಡು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯು ನಿರೀಕ್ಷೆಯಂತೆ ಭಾರತದಲ್ಲಿ ಅಡುಗೆ ಅನಿಲ ಪೂರೈಕೆ ಮೇಲೂ ಪರಿಣಾಮ ಬೀರಿದೆ. ವಾಣಿಜ್ಯ ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿಗಳನ್ನ ಸ್ಥಗಿತಗೊಳಿಸಿರುವುದಾಗಿ ಇಂಡೇನ್ ಆಯಿಲ್ ತಿಳಿಸಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಿರ್ದೇಶನದನ್ವಯ 19 ಕೆಜಿ ಮತ್ತು 47 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಮೇಲಿನ ರಿಯಾಯಿತಿಗಳನ್ನು ರದ್ದುಗೊಳಿಸಿರುವುದಾಗಿ ಹೇಳಿದೆ.
ಮಧ್ಯಪ್ರಾಚ್ಯದಲ್ಲಿನ ಭೌಗೋಳಿಕ ಮತ್ತು ರಾಜಕೀಯ ಪರಿಸ್ಥಿತಿಯನ್ನು ಪರಿಗಣಿಸಿ ಕೆಜಿ ಮತ್ತು 47.5 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ವಿಸ್ತರಿಸಲಾಗಿದ್ದ ಎಲ್ಲಾ ರಿಯಾಯಿತಿಗಳನ್ನು ಮುಂದಿನ ಅಧಿಸೂಚನೆಯವರೆಗೆ ತಡೆಹಿಡಿಯಲಾಗಿದೆ ಇಂಡೇನ್ ಗ್ಯಾಸ್ ಡಿಸ್ಟ್ರಿಬ್ಯೂಟರ್ಸ್ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ 19 ಕೆಜಿಯ ವಾಣಿಜ್ಯ ಸಿಲಿಂಡರ್ ದರ 1,814 ರೂಪಾಯಿ ಮತ್ತು 47.5 ಕೆಜಿ ಸಿಲಿಂಡರ್ 4,532 ರೂ.ಗಳಿಗೆ ಮಾರಾಟವಾಗುತ್ತಿದೆ. ಇಂಡಿಯನ್ ಆಯಿಲ್ ಕಾರ್ಪೋರೇಷನ್ ನಿರ್ಧಾರದಿಂದ ಹೋಟೆಲ್‌ಗಳು ಸೇರಿದಂತೆ ವಾಣಿಜ್ಯ ಬಳಕೆದಾರರಿಗೆ ದರ ಹೆಚ್ಚಳವಾಗುವ ಸಾಧ್ಯತೆಯಿದೆ.


