Menu

LPG Price: ವಾಣಿಜ್ಯ ಬಳಕೆ ಎಲ್‌ಪಿಜಿ ದರ 24 ರೂ. ಇಳಿಕೆ

19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಬೆಲೆಯಲ್ಲಿ 24 ರೂ. ಕಡಿತಗೊಂಡಿದೆ. ಇಂದಿನಿಂದಲೇ (ಜೂನ್ 1) ಪರಿಷ್ಕೃತ ದರ ಜಾರಿಗೆ ಬರಲಿದೆ. ಗೃಹ ಬಳಕೆ ಎಲ್‌ಪಿಜಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಇಂಡಿಯನ್ ಆಯಿಲ್ ಕಾರ್ಪೋರೇಷನ್‌ ಹೊರಡಿಸಿದ ಹೊಸ ದರದ ಪ್ರಕಾರ, ಹೊಸದಿಲ್ಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 1723.50 ರೂ. ಆಗಿದೆ. ಮೊದಲು 1747.50 ರೂ. ಇತ್ತು.

ಕಳೆದ ಫೆಬ್ರವರಿಯಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆಯಲ್ಲಿ 7 ರೂ. ಇಳಿಕೆ ಮಾಡಲಾಗಿತ್ತು. ಮಾರ್ಚ್‌ನಲ್ಲಿ 6 ರೂ. ಹೆಚ್ಚಳ ಮಾಡಲಾಗಿತ್ತು. 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆಯಲ್ಲಿ 24 ರೂ.ಕಡಿತ ಮಾಡಿರುವುದಿರಿಂದ ವಾಣಿಜ್ಯ ಸಂಸ್ಥೆಗಳು, ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು ಇತರ ಸಣ್ಣ ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ.

ಅಂತಾರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಬೇಡಿಕೆ-ಪೂರೈಕೆಯನ್ನು ಅವಲಂಬಿಸಿದೆ. ಎಲ್‌ಪಿಜಿ ದರವನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ. ಕಳೆದ ಏಪ್ರಿಲ್‌ನಿಂದ 14 ಕೆಜಿ ಗೃಹ ಬಳಕೆ ಸಿಲಿಂಡರ್‌ ಬೆಲೆ ಸ್ಥಿರವಾಗಿದೆ.

Related Posts

Leave a Reply

Your email address will not be published. Required fields are marked *