ನಟ ಡಾಕ್ಟರ್ ರಾಜ್‌ಕುಮಾರ್ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯಾ ಎಂದು ಪ್ರಶ್ನಿಸಿರುವ ನಟ ಚೇತನ್ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಡಾಕ್ಟರ್ ರಾಜ್‌ಕುಮಾರ್ ಸೇನೆ ದೂರು ದಾಖಲಿಸಿದೆ.
ಡಾಕ್ಟರ್ ರಾಜ್‌ಕುಮಾರ್ ಹುಟ್ಟಿದ ದಿನದಂದು ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿನಾ, 21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿಯಾಗಿದೆ. ಸರ್ಕಾರ ಅದನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಉಪಯೋಗಕ್ಕೆ ಹಂಚಬೇಕು. ಮತಗಳ ಲಾಭದ ಉದ್ದೇಶದಿಂದ ಹಂಚಬಾರದು ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.
ನಾವು ರಾಜ್‌ಕುಮಾರ್ ಅವರನ್ನು ಒಬ್ಬ ಶ್ರೇಷ್ಠ ಕಲಾವಿದ ಎಂದು ಗೌರವಿಸುತ್ತೇವೆ. 2006ರಲ್ಲಿ ಬೆಂಗಳೂರಿನ ಕೇಂದ್ರ ಭಾಗದಲ್ಲಿ ಸ್ಮಾರಕ ಸಂಕೀರ್ಣಕ್ಕಾಗಿ 2.5 ಎಕರೆ ಭೂಮಿಯನ್ನು ನೀಡಿದ್ದು ಎಷ್ಟು ಸಮಂಜಸ, ಸರ್ಕಾರವು ಭೂಮಿಯನ್ನು ಮಂಜೂರು ಮಾಡುವಾಗ ಮತಗಳ ಮೇಲೆ ಕಣ್ಣಿಡುವ ಬದಲು, ದೂರದೃಷ್ಟಿ ಮತ್ತು ಸಾರ್ವಜನಿಕ ಉಪಯುಕ್ತತೆ ಗಮನಿಸಬೇಕು ಎಂದು ಟ್ವೀಟ್ ಮಾಡಿದ್ದರು.
ನಟ ಚೇತನ್ ನಡೆಯ ವಿರುದ್ಧ ರಾಜ್‌ಕುಮಾರ್ ಅಭಿಮಾನಿಗಳು ರಾಜಕುಮಾರ್ ಸೇನೆಯಿಂದ ಬಸವೇಶ್ವರನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಟ ಚೇತನ್ ಅಹಿಂಸಾ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಿದ್ದಾರೆ. ಚೇತನ್ ಅವರು ರಾಜ್‌ಕುಮಾರ್ ಅಭಿಮಾನಿಗಳಿಗೆ ಅವಮಾನ ಮಾಡಿದ್ದಾರೆ. ನಮಗೆ ನೋವಾಗಿದ್ದು, ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ದೈವಕ್ಕೆ ಅಪಮಾನ: ನಟ ರಣವೀರ್ ಸಿಂಗ್ ಕ್ಷಮೆ ಯಾಚನೆ
ಚಾಮುಂಡಿ ದೈವಕ್ಕೆ ಅಪಮಾನ ಮಾಡಿ ಸಮಸ್ಯೆಗೆ ಸಿಲುಕಿದ್ದ ರಣವೀರ್ ಸಿಂಗ್ ಕ್ಷಮೆ ಯಾಚಿಸಿದ್ದಾರೆ. ಇನ್ನೊಮ್ಮೆ ಈ ರೀತಿ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುವುದಿಲ್ಲ ಎಂದು ಹೇಳಿದ್ದಾರೆ. ಕೋರ್ಟ್ ನಿರ್ದೇಶನದನ್ವಯ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ರದ್ದು ಮಾಡುವುದಕ್ಕೆ ಹೈಕೋರ್ಟ್ ಮೊರೆ ಹೋಗಿದ್ದ ರಣವೀರ್ ಕ್ಷಮೆ ಕೇಳಿದ್ದಾರೆ.
ಯಾವ ಧರ್ಮದ ಬಗ್ಗೆಯೂ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಧಕ್ಕೆ ತರುವುದಿಲ್ಲ , ಈ ಘಟನೆ ಉದ್ದೇಶಪೂರ್ವಕವಾಗಿ ಆಗಿದ್ದಲ್ಲ ಎಂದಿದ್ದಾರೆ. ಅರ್ಜಿ ವಿಚಾರಣೆ ನಡೆಯುವಾಗ ದೂರುದಾರ ಪರ ವಕೀಲರು, ರಣವೀರ್ ಸಿಂಗ್ ಯಾವಾಗ ಚಾಮುಂಡಿ ಬೆಟ್ಟಕ್ಕೆ ಬಂದು ಕ್ಷಮೆ ಕೇಳುವರು ಎಂದು ಪ್ರಶ್ನೆ ಮಾಡಿದಾಗ, ರಣವೀರ್ ಪರ ವಕೀಲ ಸಜ್ಜನ್ ಪೂವಯ್ಯ ಸೆಕ್ಯೂರಿಟಿ ಸಮಸ್ಯೆ ಇದೆ ಎಂದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಬೇಷರತ್ ಕ್ಷಮೆ ಸ್ವೀಕರಿಸಿ ಅರ್ಜಿ ಇತ್ಯರ್ಥಪಡಿಸಿದೆ.


