ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಇಂದಿನಿಂದ ಆರಂಭಗೊಂಡಿದ್ದು ಸೂಕ್ತ ಉಪಜಾತಿಯ ಹೆಸರನ್ನು ನೊಂದಾಯಿಸಲು ಆಹಾರ ಸಚಿವ ಕೆಹೆಚ್. ಮುನಿಯಪ್ಪ ಮನವಿ ಮಾಡಿದರು .
ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾತನಾಡಿದ ಸಚಿವರು
ಮಾದಿಗ ಹೋರಾಟ ಸಮಿತಿಗಳ ಸುಧೀರ್ಘ 35 ವರ್ಷಗಳ ಹೋರಟದ ಫಲ ಮುಂದಿನ ಒಂದು ತಿಂಗಳಲ್ಲಿ ಈ ಮಾದಿಗ ಸಮಯದಾಯಕ್ಕೆ ಸಿಗಲಿದೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್ ನ ಮಹತ್ವದ ತೀರ್ಪು ಬಂದ ಮೇಲೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಗೆ ಬೇಟಿ ಮಾಡಿ ಶೀಘ್ರವಾಗಿ ಅನುಷ್ಠಾನ ಗೊಳಿಸಲು ಒತ್ತಾಯಿಸಿದಾಗ ಅವರು ಈ ಒಳ ಮೀಸಲಾತಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ದವಾಗಿದೆ ಎಂದು ಹೇಳಿದರು.
ಹಾಗೆಯೇ ನಮ್ಮ ಸರ್ಕಾರ ಪರಿಶಿಷ್ಟ ಜಾತಿಯಲ್ಲಿನ 101ಉಪ ಜಾತಿಗಳ ದತ್ತಾಂಶ ಸಂಗ್ರಹಣೆಗಾಗಿ ಅಧಿಕೃತವಾಗಿ ಇಂದು 5.5.2025 ರಿಂದ ಚಾಲನೆಗೊಂಡಿದ್ದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ರವರಿಗೆ ಧನ್ಯವಾದಗಳನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಸಚಿವ ಶಿವರಾಜ್ ತಂಗಡಗಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್,ಮುಖ್ಯ ಕಾರ್ಯದರ್ಶಿ ಶಾಲನಿ ರಜನೀಶ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.