ಕೊರೋನಾ ಲಸಿಕೆ ಕೊರತೆ ಸದ್ಯದಲ್ಲಿಯೇ ಬಗೆಹರಿಯುವ ವಿಶ್ವಾಸ; ಸಿಎಂ ಬಿಎಸ್ ವೈ

ಕೊರೋನಾ ಲಸಿಕೆ ಕೊರತೆ ಸದ್ಯದಲ್ಲಿಯೇ ಬಗೆಹರಿಯುವ ವಿಶ್ವಾಸ; ಸಿಎಂ ಬಿಎಸ್ ವೈ

ಬೆಂಗಳೂರು: ರಾಜ್ಯದಲ್ಲಿರುವ ಕೊರೋನಾ ಲಸಿಕೆ ಕೊರತೆ ಸದ್ಯದಲ್ಲಿಯೇ ಬಗೆಹರಿಯುವ ವಿಶ್ವಾಸವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ.

ಕೊರೋನಾ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್ ಕರೆಯಲಾಗಿದೆ, ಹೀಗಾಗಿ ರಾಜ್ಯಕ್ಕೆ ಲಸಿಕೆ ಸದ್ಯಕ್ಕೆ ಸಿಗಲಿದೆ ಎಂದು ಹೇಳಿದ್ದಾರೆ.

ಇಂದು ಬಸವ ಜಯಂತಿ ಅಂಗವಾಗಿ ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ವಿಶ್ವಗುರು ಬಸವೇಶ್ವರರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪ ನಮನ ಸಲ್ಲಿಸಿದರು, ನಂತರ ನಗರದ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಶ್ರಮ ಗೌರವವನ್ನು ಎತ್ತಿ ಹಿಡಿದು, ಕಾಯಕ ದಾಸೋಹ ತತ್ವಗಳ ಮೂಲಕ ನಾವು ಮಾಡುವ ಕೆಲಸಕ್ಕೆ ಆಧ್ಯಾತ್ಮಿಕ ಮುಖವನ್ನು ನೀಡಿದ, ವಚನಗಳ ತಿಳಿನುಡಿಗಳ ಮೂಲಕ ಸಮಾಜಕ್ಕೆ ಸರಿದಾರಿ ತೋರಿದ ಬಸವಣ್ಣನವರ ಉಪದೇಶಗಳ ಬೆಳಕಿನಲ್ಲಿ ಸಾರ್ಥಕ ಜೀವನ ನಡೆಸೋಣ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಸಂಪುಟ ಸಚಿವರು, ಬೇಲಿಮಠದ ಶಿವರುದ್ರ ಸ್ವಾಮೀಜಿ ಉಪಸ್ಥಿತರಿದ್ದರು

, ,

Leave a Reply

Your email address will not be published. Required fields are marked *