Menu

ಚುನಾವಣೆ ಘೋಷಣೆಯಾದ್ರೆ ಕಾಂಗ್ರೆಸ್‌ನಿಂದ 25 ಶಾಸಕರು, ಸಚಿವರು ಬಿಜೆಪಿ ಸೇರಲು ತುದಿಗಾಲಲ್ಲಿದ್ದಾರೆ: ಬಿ.ವೈ. ವಿಜಯೇಂದ್ರ ಬಾಂಬ್‌!

ಉದಯಕಾಲ ನ್ಯೂಸ್, ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದ್ದು, ಭ್ರಷ್ಟಾಚಾರದಿಂದ ತನ್ನ ಅಸ್ತಿತ್ವ ಕಳೆದುಕೊಂಡಿದೆ.ಚುನಾವಣಾ ದಿನಾಂಕ ಘೋಷಣೆಯಾದರೆ ಸಚಿವರು ಸೇರಿ ಕಾಂಗ್ರೆಸ್‌ನ 20ರಿಂದ 25 ಜನ ಶಾಸಕರು ಬಿಜೆಪಿ ಸೇರಲು ನಾ ಮುಂದು ತಾ ಮುಂದು ಅಂತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಸ್ಫೋಟಕ ಮಾಹಿತಿ ನೀಡಿದ್ದಾರೆ.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯನ್ನು ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಹಾಗೂ ಆಂತರಿಕ ಬೆಳವಣಿಗೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬಿಜೆಪಿ ಸೇರಲು ಕಾಂಗ್ರೆಸ್ ಶಾಸಕರ ರೇಸ್‌
” ಕಾಂಗ್ರೆಸ್ ಸಚಿವರಿಗೆ ಬಿಜೆಪಿ ಗಾಳ ಹಾಕುವ ಅಗತ್ಯ ನಮಗಿಲ್ಲ; ನಾಳೆಯೇ ವಿಧಾನಸಭೆ ಚುನಾವಣೆ ಘೋಷಣೆಯಾದರೂ ಡಿಕೆಶಿ ಸಂಪುಟದ ಸಚಿವರು ಸೇರಿದಂತೆ ಕಾಂಗ್ರೆಸ್‌ನ 20-25 ಜನ ಶಾಸಕರು ಕಮಲ ಪಾಳಯಕ್ಕೆ ಸೇರಲು ತುದಿಗಾಲಿನಲ್ಲಿ ನಿಂತಿದ್ದಾರೆ. ಆಡಳಿತ ಪಕ್ಷದಲ್ಲೇ ಮುಖ್ಯಮಂತ್ರಿ ಹಾಗೂ ಸರ್ಕಾರದ ಮೇಲಿನ ವಿಶ್ವಾಸ ಸಂಪೂರ್ಣವಾಗಿ ಕುಸಿದಿದೆ” ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಅಭಿವೃದ್ಧಿ ಮರೆತ ರಾಜ್ಯ ಸರ್ಕಾರ
ರಾಜ್ಯ ಕಾಂಗ್ರೆಸ್ ಸರ್ಕಾರವು ಕೇವಲ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದು, ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ದೂರಿದರು. ಇಂದಿಗೂ ಚುನಾವಣೆ ನಡೆದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅಸಾಧ್ಯ ಎಂದರು.

‘ಸ್ಟಿಂಗ್ ಆಪರೇಷನ್’ ರಾಜಕೀಯ ವ್ಯಭಿಚಾರ
ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ‘ಸ್ಟಿಂಗ್ ಆಪರೇಷನ್’ (Sting Operation) ಕುರಿತು ಮಾತನಾಡಿದ ಅವರು, “ಯಾರೋ ಸಿಎಂ ಆಗಲು, ಇನ್ನು ಕೆಲವರು ಸಚಿವರಾಗಲು ಸ್ಟಿಂಗ್ ಮಾಡಿಕೊಂಡಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿವೆ. ಸ್ಟಿಂಗ್ ಮಾಡುವುದು ರಾಜಕೀಯ ವ್ಯಭಿಚಾರವಿದ್ದಂತೆ. ಕರ್ನಾಟಕದ ರಾಜಕಾರಣ ಹಿಂದೆಂದೂ ಈ ಮಟ್ಟಕ್ಕೆ ಕುಸಿದಿರಲಿಲ್ಲ. ಇದು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ” ಎಂದು ತೀವ್ರ ಕಿಡಿಕಾರಿದರು.

ರಾಜ್ಯದಲ್ಲಿ ಭೀಕರ ಬರಗಾಲವಿದ್ದು, ಜನ ಸಂಕಷ್ಟದಲ್ಲಿದ್ದಾರೆ. ಸರ್ಕಾರ ಕೇವಲ ಬೋಗಸ್ ಘೋಷಣೆಗಳನ್ನು ಮಾಡುತ್ತಿದೆಯೇ ವಿನಃ ಸಂತ್ರಸ್ತರಿಗೆ ಸರಿಯಾಗಿ ಪರಿಹಾರ ನೀಡುತ್ತಿಲ್ಲ. ಬರ ಪರಿಹಾರ ಒದಗಿಸಲು ವಿಫಲವಾಗಿರುವ ಸರ್ಕಾರ, ಇಂತಹ ಅನಗತ್ಯ ಸ್ಟಿಂಗ್ ವಿವಾದಗಳನ್ನು ಹುಟ್ಟುಹಾಕಿ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ ಎಂದು ಹರಿಹಾಯ್ದರು.

“ರಾಹುಲ್ ಗಾಂಧಿ ದೆಹಲಿ ನಾಟಕ”
ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ ಹಾಗೂ ಸಿಜೆಐ ಭೇಟಿಯ ನಾಟಕಗಳ ಬಗ್ಗೆ ಮಾತನಾಡಿದ ಅವರು, “ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ. ಅವರ ಯಾವುದೇ ಪಿತೂರಿಗಳನ್ನು ದೇಶದ ಜನ ಒಪ್ಪುವುದಿಲ್ಲ. ತಾಕತ್ ಇದ್ದರೆ ಕಾಂಗ್ರೆಸ್ ಪಕ್ಷ ಜನರ ಮನಸ್ಸು ಗೆದ್ದು ಅಧಿಕಾರಕ್ಕೆ ಬರಲಿ” ಎಂದು ಸವಾಲು ಹಾಕಿದರು.

#BYVijayendra #BJP #CongressMLAs #KarnatakaPolitics #StingOperation #DKShivakumar #BellaryNews #BanglaoreNews #UdayakalaNews

Related Posts

Leave a Reply

Your email address will not be published. Required fields are marked *