ಕಾಂಗ್ರೆಸ್ ಹಾಗೂ ಇತರ ಪ್ರತಿಪಕ್ಷಗಳು ಫೋನ್ ಕದ್ದಾಲಿಕೆ ಆಗಿದೆ ಎಂದು ಮಾಡಿರುವ ಆರೋಪ ಸತ್ಯಕ್ಕೆ ದೂರ: ಅಶ್ವತ್ಥ ನಾರಾಯಣ್

ಬೆಂಗಳೂರು,ಜು.20 ಕಾಂಗ್ರೆಸ್ ಹಾಗೂ ಇತರ ಪ್ರತಿಪಕ್ಷಗಳು ಫೋನ್ ಕದ್ದಾಲಿಕೆ ಆಗಿದೆ ಎಂದು ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ್ ಸ್ಪಷ್ಟಪಡಿಸಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಆರೊಪ ಮಾಡಿದವರು ಯಾವುದೇ ಸಾಕ್ಷಿ ನೀಡಿಲ್ಲ. ಈ ಬಗ್ಗೆ ಬಹಿರಂಗ ಚರ್ಚೆಗೆ ಬಿಜೆಪಿ ಸಿದ್ಧವಿದೆ.
ನಮ್ಮ ಪಕ್ಷ ಈ ರೀತಿಯ ಕೆಲಸ ಮಾಡುವುದಿಲ್ಲ. ಕಾಂಗ್ರೆಸ್ ಆ ಕೆಲಸ ಮಾಡುತ್ತದೆ. ಯುಪಿಎ ಸರ್ಕಾರದಲ್ಲಿ ಫೋನ್ ಕದ್ದಾಲಿಕೆಗೆ ಸಾವಿರಾರು ರೂಪಾಯಿ ಖರ್ಚು ಮಾಡುತ್ತಿರುವುದಾಗಿ ಅಂದಿನ ಸರ್ಕಾರದಲ್ಲಿ ಮಂತ್ರಿಗಳಾದವರೇ ಹೇಳಿದ್ದರು.ಡಾಟಾ ಲೀಕ್ ಆಗಿದ್ದರೆ ಅದಕ್ಕೆ ಕೇಂದ್ರ ಸರ್ಕಾರ ಹೇಗೆ ಹೊಣೆಯಾಗುತ್ತದೆ. ವಾಟ್ಸ್ ಆಪ್ ನಿಂದ ಕದ್ದಾಲಿಸಲು ಸಾಧ್ಯವಿಲ್ಲ ಎಂದು ಕಪಿಲ್ ಸಿಬಲ್ ಅವರೇ ಸುಪ್ರೀಂ ಕೋರ್ಟ್ ಗೆ ಹೇಳಿದ್ದಾರೆ.
ಪೆಗಾಸಿಸ್ ಸಂಸ್ಥೆ ಹೊರದೇಶಗಳಲ್ಲಿ ಈ ರೀತಿ ಚಟುವಟಿಕಡಳನ್ನು ನಡೆಸುತ್ತದೆ.
ದೇಶದ್ರೋಹಿಗಳು ನಮ್ಮ ಸರ್ಕಾರದ ವಿರುಧ ಅಪ ಪ್ರಚಾರ ಮಾಡುವುದನ್ನು ಖಂಡಿಸುತ್ತೇವೆ ಎಂದರು.
ಪೆಗಾಸಿಸ್ ಮತ್ತು ಅಮ್ನೆಸ್ಟಿ ಸಂಸ್ಥೆಗಳು ನಮ್ಮ ದೇಶದ ಆಂತರಿಕ ವಿಚಾರಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿವೆ.
ಕಾಂಗ್ರೆಸ್, ಎಡ ಪಕ್ಷಗಳು ಸದನ ನಡೆಯದಂತೆ ನಡೆದುಕೊಂಡಿರುವುದು ಖಂಡನೀಯ.ಯುಪಿಎ ಅವಧಿಯಲ್ಲಿ ಪ್ರತಿ ತಿಂಗಳು 9000 ,ಫೋನ್ ಹಾಗೂ 500 ಇಮೇಲ್ ಕದ್ದಾಲಿಕೆ ನಡೆಸಿರುವ ದಾಖಲೆ ಇದೆ.
ಕೇಂದ್ರ ಸರ್ಕಾರ ಕದ್ದಾಲಿಕೆ ಮಾಡಿರುವ ದಾಖಲೆ ಇಲ್ಲ. ಮಹತ್ವದ ಬಿಲ್ ಗಳು ಬರುತ್ತಿರುವ. ಸಂದರ್ಭದಲ್ಲಿ ಈ ರೀತಿಯ ಬೆಳವಣಿಗೆ ನಡೆದಿರುವುದು ಸರಿಯಲ್ಲ.
ಕೊವಿಡ್ ಸಂದರ್ಭವನ್ನು ಯಶಸ್ವಿಯಾಗಿ ನಿಭಾಯಿಸಿರುವುದನ್ನು ಕಾಂಗ್ರೆಸ್ ಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಅಶ್ವತ್ಥ ನಾರಾಯಣ್ ಹೇಳಿದರು.

, ,

Leave a Reply

Your email address will not be published. Required fields are marked *