Menu

ಕಾಂಗ್ರೆಸ್ ಸರ್ಕಾರದಿಂದ ವಿಪಕ್ಷ ಶಾಸಕರನ್ನು ಹತ್ತಿಕ್ಕುವ ಪ್ರಯತ್ನ: ಆರ್‌ ಅಶೋಕ್‌ ಕಿಡಿ

ರೌಡಿ ಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಅವನ ತಾಯಿ ವಿಜಯಲಕ್ಷ್ಮೀ ಅವರು “ನಾನು ಬೈರತಿ ಬಸವರಾಜ್ ವಿರುದ್ಧ ದೂರು ಕೊಟ್ಟಿಲ್ಲ, ಪೊಲೀಸರೇ ಹೆಸರು ಹಾಕಿಕೊಂಡಿದ್ದಾರೆ” ಎಂದು ಹೇಳಿರುವುದು ಕಾಂಗ್ರೆಸ್ ಸರ್ಕಾರ ಈ ಪ್ರಕರಣದಲ್ಲಿ ಯಾವ ಕೀಳು ಮಟ್ಟಕ್ಕೆ ಇಳಿದು ರಾಜಕೀಯ ದ್ವೇಷ ಸಾಧಿಸುತ್ತಿದೆ ಎನ್ನುವುದನ್ನ ಸಾಬೀತು ಪಡಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಕಿಡಿ ಕಾರಿದ್ದಾರೆ.

ಮಾತೆತ್ತಿದರೆ ಸಿಬಿಐ, ಐಟಿ, ಇಡಿ ಮೂಲಕ ಕೇಂದ್ರ ಸರ್ಕಾರ ವಿಪಕ್ಷಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಅಪಪ್ರಚಾರ ಮಾಡುವ ಕರ್ನಾಟಕ ಕಾಂಗ್ರೆಸ್‌ ನಾಯಕರು, ದೂರಿನಲ್ಲಿ ಶಾಸಕರ ಹೆಸರೇ ಇಲ್ಲದಿದ್ದರೂ ಅವರ ಮೇಲೆ ದುರುದ್ದೇಶದಿಂದ ಎಫ್ಐಆರ್ ಹಾಕಿರುವುದು ಯಾವ ಸೀಮೆ ನ್ಯಾಯ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಅವರು ಪ್ರಶ್ನಿಸಿದ್ದಾರೆ.

ಸುಳ್ಳು ಕೇಸುಗಳನ್ನು ಹಾಕುವ ಮೂಲಕ ಬಿಜೆಪಿ ಶಾಸಕರಿಗೆ ಬೆದರಿಕೆ ಹಾಕಬಹುದು ಎಂಬ ಭ್ರಮೆಯಿಂದ ಕಾಂಗ್ರೆಸ್ ಸರ್ಕಾರ ಹೊರಬರಬೇಕು. ಬಿಜೆಪಿ ಯಾವುದೇ ಅಪರಾಧಿಗಳನ್ನು ರಕ್ಷಿಸುವುದಿಲ್ಲ. ಆರೋಪ ಇದ್ದರೆ ಕಾನೂನಿನ ಪ್ರಕಾರ ತನಿಖೆ ಮಾಡಲಿ. ನ್ಯಾಯಾಲಯದಲ್ಲಿ ಸಾಬೀತು ಮಾಡಲಿ. ಅದು ಬಿಟ್ಟು ಈ ರೀತಿ ದ್ವೇಷ ರಾಜಕಾರಣ ಮಾಡಿ ವಿಪಕ್ಷ ಶಾಸಕರನ್ನು ಟಾರ್ಗೆಟ್ ಮಾಡಿದರೆ, ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ವಿರುದ್ಧ ವಿರುದ್ಧ ಎಫ್​ಐಅರ್ ದಾಖಲಾಗಿದೆ. ಶಿವಪ್ರಕಾಶ್ ಯಾರು ಅನ್ನುವುದೇ ನನಗೆ ಗೊತ್ತಿಲ್ಲ, ದೂರು ಕೊಟ್ಟ ಮಾತ್ರಕ್ಕೆ ತಮ್ಮ ವಿರುದ್ಧ ಕೇಸ್ ದಾಖಲಿಸಲಾಗಿದೆ, ಇದರ ಹಿಂದೆ ರಾಜಕೀಯ ಕುತಂತ್ರ ಸ್ಪಷ್ಟವಾಗಿ ಕಾಣುತ್ತಿದೆ ಎಂದು ಭೈರತಿ ಬಸವರಾಜ್ ಹೇಳಿದ್ದಾರೆ.

Related Posts

Leave a Reply

Your email address will not be published. Required fields are marked *