Menu

ಕಾಂಗ್ರೆಸ್‌ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆಯಲ್ಲಿ ಇಂದು ಸಂಜೆ ಅಂತ್ಯಸಂಸ್ಕಾರ

ಕಾಂಗ್ರೆಸ್​​ನ ಹಿರಿಯ ನಾಯಕ, ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಭಾನುವಾರ ನಿಧನರಾದರು. ಅವರಿಗೆ 94 ವರ್ಷ ಆಗಿತ್ತು. ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಂತ್ಯಸಂಸ್ಕಾರ ದಾವಣಗೆರೆಯಲ್ಲಿ ಇಂದು ಸಂಜೆ ನಡೆಯಲಿದೆ.

ಅವರ ನಿಧನ ಪ್ರಯುಕ್ತ ಗೌರವಾರ್ಥವಾಗಿ ಡಿ. 15 ರಂದು ದಾವಣಗೆರೆ ನಗರದ ವ್ಯಾಪ್ತಿಯ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

ಬೆಂಗಳೂರಿನಿಂದ ಶಾಮನೂರರ ಪಾರ್ಥಿವ ಶರೀರ ದಾವಣಗೆರೆಗೆ ತರಲಾಗಿದೆ. ಮಧ್ಯಾಹ್ನ 12 ರ ವರೆಗೆ ಶಾಮನೂರ ಪುತ್ರ ಸಚಿವ ಎಸ್​​ಎಸ್​​ ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ಪಾರ್ಥಿವ ಶರೀರ ಇರಲಿದೆ. ಕುಟುಂಬ ಸದಸ್ಯರು ಧಾರ್ಮಿಕ ವಿಧಿ ವಿಧಾನಗಳ ಪ್ರಕಾರ ಪೂಜೆ ಸಲ್ಲಿಸಲಿದ್ದು, ವಿವಿಐಪಿಗಳಿಗೆ ಮಾತ್ರ ದರ್ಶನಕ್ಕೆ ಅವಕಾಶವಿರಲಿದೆ. ಕ 12 ಗಂಟೆಯಿಂದ ಸಂಜೆ 4 ಗಂಟೆವರೆಗೆ ನಗರದ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತದೆ. ಅಲ್ಲಿಂದ ಮೆರವಣಿಗೆ ಮೂಲಕ‌ ಆನೆಕೊಂಡದ ಶಾಮನೂರ ಮನೆತನದ ಕಲ್ಲೇಶ್ವರ ರೈಸ್ ಮಿಲ್ ಜಾಗಕ್ಕೆ ಕರೆತರಲಾಗುತ್ತದೆ.

ಸಂಜೆ 5:30ಕ್ಕೆ ವೀರಶೈವ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಶಾಮನೂರು ಶಿವಶಂಕರಪ್ಪ ತಂದೆ, ತಾಯಿ, ಸಹೋದರರು ಹಾಗೂ ಧರ್ಮಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಿವಶಂಕರಪ್ಪ ಅಂತ್ಯಸಂಸ್ಕಾರ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ನೂರಕ್ಕೂ ಹೆಚ್ಚು ಗಣ್ಯರು ಆಗಮಿಸಲಿದ್ದಾರೆ. ನೂರಕ್ಕೂ ಹೆಚ್ಚು ಪಂಚಪೀಠ ಮತ್ತು ವಿರಕ್ತಮಠಗಳ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ.

ಗಣ್ಯರ ಸಂತಾಪ

ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌,  ಪ್ರತಿಪಕ್ಷ ನಾyಕ ಆರ್‌.ಅಶೋಕ ಮತ್ತಿತರ ಗಣ್ಯರು ಸಂತಾಪ  ವ್ಯಕ್ತಪಡಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸಿದ್ದಾರೆ.

 

Related Posts

Leave a Reply

Your email address will not be published. Required fields are marked *