ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ನಿಯಮಿತ ತಪಾಸಣೆಗಾಗಿ ತಜ್ಞರು ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ಸೋನಿಯಾ ಗಾಂಧಿ ಬಹಳ ಸಮಯದಿಂದ ಕೆಮ್ಮು ಸಮಸ್ಯೆಯಿಂದ ಬಳಲುತ್ತಿದ್ದಾರೆ. ದೆಹಲಿಯಲ್ಲಿ ವಾಯು ಮಾಲಿನ್ಯ ತೀವ್ರಗೊಂಡು ಬಹಳಷ್ಟು ಜನ ಕೆಮ್ಮು ಮತ್ತು ಉಸಿರಾಟ ಸಮಸ್ಯೆ ಎದುರಿಸುತ್ತಿದ್ದಾರೆ ಎನ್ನಲಾಗಿದೆ. ಸೋನಿಯಾ ಗಾಂಧಿ ಅವರಿಗೆ ಡಿಸೆಂಬರ್ನಲ್ಲಿ 79 ವರ್ಷ ಪೂರ್ಣಗೊಂಡಿದೆ. ಕೆಲವು ತಿಂಗಳ ಹಿಂದೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯ ಕಾರಣ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕಳೆದ ಫೆಬ್ರವರಿಯಲ್ಲಿ ಆಸ್ಪತ್ರೆಯಲ್ಲಿ ಗ್ಯಾಸ್ಟ್ರೋಎಂಟರಾಲಜಿ ತಜ್ಞರ ಮೇಲ್ವಿ ಚಾರಣೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಜೂನ್ 19 ರಂದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗೆ ಚಿಕಿತ್ಸೆ ಪಡೆದ ನಂತರ ಸೋನಿಯಾ ಗಾಂಧಿ ಅವರನ್ನು ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಆಗ ನಾಲ್ಕು ದಿನ ಅವರ ಮೇಲೆ ತೀವ್ರ ವೈದ್ಯಕೀಯ ನಿಗಾ ಇಡ ಲಾಗಿತ್ತು. ಜೂನ್ 7 ರಂದು ಹಿಮಾಚಲ ಪ್ರದೇಶದ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ನಿಯಮಿತ ಆರೋಗ್ಯ ತಪಾಸಣೆಗಾಗಿ ತೆರಳಿದ್ದರು.
ಸೆಪ್ಟೆಂಬರ್ 2022 ರಲ್ಲಿ ಸೋನಿಯಾ ಗಾಂಧಿ ವೈದ್ಯಕೀಯ ತಪಾಸಣೆಗಾಗಿ ಅಮೆರಿಕಕ್ಕೆ ಹೋಗಲು ಮುಂದಾಗಿದ್ದರು, ಕೋವಿಡ್-19 ಕೋವಿಡ್ನಿಂದಾಗಿ ಆ ಭೇಟಿಯನ್ನು ಮುಂದೂಡಲಾಗಿತ್ತು.


