Thursday, January 22, 2026
Menu

ಕೈಶಾಸಕರು ಬೀದಿ ರೌಡಿಗಳಂತೆ ವರ್ತಿಸಿ ರಾಜ್ಯಪಾಲರಿಗೆ, ಸದನಕ್ಕೆ ಅಗೌರವ ತೋರಿದ್ದಾರೆ: ಆರ್‌ ಅಶೋಕ

R Ashoka

@INCKarnataka ಪಕ್ಷದ ಶಾಸಕರು ಬೀದಿ ರೌಡಿಗಳಂತೆ ವರ್ತಿಸಿ ಸಂವಿಧಾನಕ್ಕೆ, ರಾಜ್ಯಪಾಲರಿಗೆ, ಸದನಕ್ಕೆ ಅಗೌರವ ತೋರಿದ್ದಾರೆ. ಸದನದ ಸಂಪ್ರದಾಯ ಹಾಗೂ ನಿಯಮಾವಳಿಗಳನ್ನ ಗಾಳಿಗೆ ತೂರಿ ರಾಜ್ಯಪಾಲರ ಭಾಷಣಕ್ಕೆ ಮೂಲಕ ಅಡ್ಡಿ ಪಡಿಸುವ ಮೂಲಕ ಸದನಕ್ಕೆ ಅಪಮಾನ ಎಸಗಿದ್ದಾರೆ. ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಇಂದು ಅತ್ಯಂತ ಕರಾಳ ದಿನ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಆಗಮಿಸಿ ತಮ್ಮ ಭಾಷಣವನ್ನ ಮಂಡಿಸುವ ಮೂಲಕ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಅನುಚಾನವಾಗಿ ಪಾಲಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅವರು ಪೋಸ್ಟ್‌ ಮಾಡಿದ್ದಾರೆ.

ಸದನದ ಹಿರಿಯ ಸದಸ್ಯರು ಹಾಗೂ ಕಾನೂನು ಸಚಿವರಾದ  @HKPatilINC ಅವರೇ ಸ್ವತಃ ಈ ಕೆಟ್ಟ ಸಂಪ್ರದಾಯಕ್ಕೆ ಮೇಲ್ಪಂಕ್ತಿ ಹಾಕಿಕೊಟ್ಟಿರುವುದು ನಿಜಕ್ಕೂ ನಾಚಿಕೆಗೇಡು ಮತ್ತು ಖಂಡನೀಯ. ಕಾನೂನು ಸಚಿವ ಶ್ರೀ ಹೆಚ್.ಕೆ.ಪಾಟೀಲ್ ಅವರಿಗೆ ಆ ಸ್ಥಾನದಲ್ಲಿ ಒಂದು ಕ್ಷಣವೂ ಮುಂದುವರೆಯುವ ಅರ್ಹತೆ ಇಲ್ಲ ಎಂದು ತಿಳಿಸಿದ್ದಾರೆ.

ಇಷ್ಟಕ್ಕೂ ರಾಜ್ಯಪಾಲರು ಈ ರೀತಿ ತಮ್ಮ ಭಾಷಣವನ್ನ ಪೂರ್ತಿ ಓದದೆ ಕೇವಲ ಸಾಂಕೇತಿಕವಾಗಿ ಮಂಡಿಸಿ ಹೊರಟಿರುವುದು ಇದೇನು ಮೊದಲಲ್ಲ. ಈ ಹಿಂದೆ ಮಾಜಿ ರಾಜ್ಯಪಾಲರುಗಳಾದ ಶ್ರೀ ಖುರ್ಷಿದ್ ಆಲಂ ಖಾನ್ ಹಾಗೂ ಶ್ರೀ ಹಂಸರಾಜ್ ಭಾರಧ್ವಾಜ್ ಅವರು ಈ ರೀತಿ ಮಾಡಿದ್ದಾರೆ.  ಇನ್ನು ವಿಧಾನ ಪರಿಷತ್ ನಲ್ಲಿ ಸದಸ್ಯರಾದ ಶ್ರೀ @HariprasadBK2 ಅವರು ಒಬ್ಬ ಪುಡಿ ರೌಡಿ ರೀತಿ ನಡೆದುಕೊಂಡಿರುವುದು ಕಾಂಗ್ರೆಸ್ ಪಕ್ಷದ ಸಂಸ್ಕೃತಿಗೆ ಕನ್ನಡಿ ಹಿಡಿದಂತಿತ್ತು ಎಂದು ಬರೆದು ಕೊಂಡಿದ್ದಾರೆ.

ಇಂದಿನ ಘಟನಾವಳಿಗಳು ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನವಾಗಿದ್ದು, ಸದನದ ಗೌರವಕ್ಕೆ ಚ್ಯುತಿ ತರುವ ರೀತಿ ಗೂಂಡಾ ವರ್ತನೆ ತೋರಿದ ಕಾಂಗ್ರೆಸ್ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸನ್ಮಾನ್ಯ ಸಭಾಧ್ಯಕ್ಷರಾದ ಶ್ರೀ @utkhader ಅವರಿಗೆ ಪತ್ರ ಮುಖೇನ ಒತ್ತಾಯಿಸಿದ್ದೇನೆ ಎಂದು ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *