ಸಂಸತ್ತಿನಲ್ಲಿ ಡಾ. ಅಂಬೇಡ್ಕರ್ ಅವರನ್ನು ಅವಮಾನಿಸುವಂತೆ ಹೇಳಿಕೆ ನೀಡಿರುವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಆರೆಸ್ಸೆಸ್ ಕಚೇರಿಗೆ ಮುತ್ತಿಗೆ ಹಾಕಲಯ ಯತ್ನಿಸಿದಾಗ ಪ್ರತಿಭಟನಾಕಾ ರರನ್ನು ಪೊಲೀಸರು ತಡೆದರು. ಈ ವೇಳೆ ಲಕ್ಷ್ಮಣ್ ಮತ್ತು ಪೊಲೀಸರ ಮಧ್ಯೆ ತೀವ್ರ ವಾಗ್ವಾದ ನಡೆಯಿತು.
ಇತ್ತೀಚೆಗೆ ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಅಮಿತ್ ಶಾ, ಅಂಬೇಡ್ಕರ್ ಹೆಸರನ್ನು ಹೇಳುತ್ತಿರುವುದು ಒಂದು ಫ್ಯಾಷನ್ ಆಗಿದೆ. ಅದಕ್ಕಿಂತ ದೇವರ ಹೆಸರನ್ನು ಹೇಳುತ್ತಿದ್ದರೆ ಏಳೇಳು ಜನ್ಮಕ್ಕೆ ಪುಣ್ಯ ಪ್ರಾಪ್ತಿಯಾಗುತ್ತಿತ್ತು ಎಂದು ಹೇಳುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು. ಈ ಹೇಳಿಕೆಗೆ ದೇಶಾದ್ಯಂತ ವ್ಯಾಪಕ ವಿರೋಧ ಕೂಡ ವ್ಯಕ್ತವಾಗಿತ್ತು.