Thursday, January 30, 2025
Menu

ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್‌ ಜಾರಿ ಚಿಂತನೆ: ಪರಮೇಶ್ವರ್‌

ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮತ್ತೆ ಟೋಯಿಂಗ್ ವ್ಯವಸ್ಥೆ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು ಟ್ರಾಫಿಕ್ ಪೊಲೀಸ್ ವಿಭಾಗವು ನಗರದ ಇನ್ಫೆಂಟ್ರಿ ರಸ್ತೆಯ ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಆಯೋಜಿಸಿದ್ದ ನಗರ ಚಲನಶೀಲತೆ ಸವಾಲುಗಳು ಮತ್ತು ಪೊಲೀಸರ ಪಾತ್ರ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದರು.

ಸಂಚಾರ ದಟ್ಟಣೆ ಹೆಚ್ಚು ಇರುವ ಕೆಲವು ರಸ್ತೆಗಳಲ್ಲಿ ಟೋಯಿಂಗ್ ವ್ಯವಸ್ಥೆ ಮರುಜಾರಿಗೆ ಚಿಂತನೆ ನಡೆಸಿದ್ದೇವೆ. ನೋ ಪಾರ್ಕಿಂಗ್ ಜಾಗದಲ್ಲಿ ವಾಹನಗಳನ್ನು ಪಾರ್ಕ್ ಮಾಡುವುದರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಟ್ರಾಫಿಕ್ ಜಾಮ್ ಸಮಸ್ಯೆ ಬಗೆಹರಿಸಲು ತಂತ್ರಜ್ಞಾನ ಬಳಕೆ ಸೇರಿದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಗತ್ಯ ಇದ್ದಲ್ಲಿ ಇನ್ನಷ್ಟು ಟ್ರಾಫಿಕ್ ಪೊಲೀಸ್ ಸ್ಟೇಷನ್​ಗಳನ್ನು ಆರಂಭಿಸಲಾಗುವುದು ಎಂದು ಪರಮೇಶ್ವರ್ ತಿಳಿಸಿದ್ದಾರೆ.

ಡೆಲಿವರಿ ಬಾಯ್ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಟೋಯಿಂಗ್ ಮಾಡಲಾಗಿದ್ದು, ಆತ ವಾಹನ ಬಿಡಿಸಿಕೊಳ್ಳಲು ಟೋಯಿಂಗ್‌ ವಾಹನದ ಹಿಂದೆ ಓಡುವ ವೀಡಿಯೊ 2022ರಲ್ಲಿ ವೈರಲ್ ಆಗಿ ಟ್ರಾಫಿಕ್ ಪೊಲೀಸರು ಹಾಗೂ ಟೋಯಿಂಗ್‌ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ಸರ್ಕಾರ ಟೋಯಿಂಗ್ ಸ್ಥಗಿತಗೊಳಿಸಿತ್ತು. ನೋ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿರುವ ವಾಹನಕ್ಕೆ ವ್ಹೀಲ್ ಕ್ಲ್ಯಾಂಪ್ ಅಳವಡಿಸಿ ವಾಹನ ಮಾಲೀಕರು ಬಂದ ಬಳಿಕ ಸ್ಥಳದಲ್ಲೇ ದಂಡ ವಿಧಿಸುವ ವ್ಯವಸ್ಥೆ ಅನುಸರಿಸಲಾಗುತ್ತಿದೆ.

Related Posts

Leave a Reply

Your email address will not be published. Required fields are marked *