Menu

ದಕ್ಷಿಣಕನ್ನಡದಲ್ಲಿ ಮುಂದುವರಿದ ಮಳೆ: ಕಟೀಲಿನಲ್ಲಿ ಮನೆಗಳು ಜಲಾವೃತ, ಕರಾವಳಿ ಜಿಲ್ಲೆಗಳು ಹಾಗೂ ಕೊಡಗಿನಲ್ಲಿ ರೆಡ್‌ ಅಲರ್ಟ್‌

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನಿರಂತರ ಮಳೆ ಮುಂದುವರಿದಿದ್ದು, ಜನಜೀವನಕ್ಕೆ ತೊಡಕಾಗಿದೆ. ಜಿಲ್ಲೆಯ ಹಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ.

ಕಟೀಲು ಪ್ರದೇಶದಲ್ಲಿ ನಂದಿನಿ ನದಿ ತುಂಬಿ ಹರಿಯುತ್ತಿದ್ದು, ನದಿಪಾತ್ರದ ತಗ್ಗು ಪ್ರದೇಶಗಳು, ಅಡಿಕೆ ತೋಟಗಳು ಜಲಾವೃತಗೊಂಡಿವೆ, ಮಿತ್ತಬೈಲ್ ನಲ್ಲಿ ಕೆಲವು ಮನೆಗಳು ನೀರಿನಲ್ಲಿ ಸುತ್ತುವರಿದು, ಜನ ಮನೆಯಿಂದ ಹೊರಬರಲಾರದ ಸ್ಥಿತಿಯಲ್ಲಿದ್ದಾರೆ. ಪಟ್ಟಣ ಪಂಚಾಯತ್ ಸಿಬ್ಬಂದಿ, ಅಗ್ನಿ ಶಾಮಕ ದಳಮನೆಯೊಳಗೆ ಸಿಲುಕಿರುವವರನ್ನು ದೋಣಿ ಮೂಲಕ ಸುರಕ್ಷಿತವಾಗಿ ಸ್ಥಳಾಂತರ ಮಾಡಿದ್ದಾರೆ.

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೊಡಗು, ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಶಿವಮೊಗ್ಗ, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ,ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Related Posts

Leave a Reply

Your email address will not be published. Required fields are marked *