Menu

ತಂದೆಯಿಂದ ನಿರಂತರ ಅತ್ಯಾಚಾರ: ಮಗುವಿಗೆ ಜನ್ಮ ನೀಡಿದ ಬಾಲಕಿ

ಅಹಮದಾಬಾದ್​ನಲ್ಲಿ ಮಗಳ ಮೇಲೆ ತಂದೆ ನಿರಂತರ ಅತ್ಯಾಚಾರವೆಸಗಿ ಗರ್ಭವತಿ ಮಾಡಿರುವ ಪ್ರಕರಣ ವರದಿಯಾಗಿದೆ. 14 ವರ್ಷದ ಸಂತ್ರಸ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.  ದಿನಗೂಲಿ ಕಾರ್ಮಿಕನಾಗಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದಾಗ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಆಗ ಆಕೆ ವೈದ್ಯರ ಬಳಿ ಎಲ್ಲ ವಿಚಾರ ತಿಳಿಸಿದ್ದು,ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಮತ್ತು ಪೋಕ್ಸೊ ಕಾಯ್ದೆಯ ಹಲವು ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿದ್ದಾರೆ. ಆರು ಮಕ್ಕಳನ್ನು ಹೊಂದಿರುವ ಆರೋಪಿಯು ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಪೊಲೀಸ್ ವರಿಷ್ಠಾಧಿಕಾರಿ ಸಾಗರ್ ಜೈನ್ ಮಾತನಾಡಿ, ಸಂತ್ರಸ್ತೆಯ ತಾಯಿ ಹತ್ತು ವರ್ಷಗಳ ಹಿಂದೆ ನಿಧನರಾಗಿದ್ದರು, ಇದಾದ ಬಳಿಕ ಆರೋಪಿ ಮಗಳನ್ನೇ ಬಳಸಿಕೊಂಡಿದ್ದಾನೆಂದು ಹೇಳಿದ್ದಾರೆ.
ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಜೈನ್ ತಿಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *