ಲಾಕ್ ಡೌನ್ ನಿಂದ ಕೊರೊನಾ ಪ್ರಕರಣಗಳು ಇಳಿಕೆಯಾಗಿದೆ; ಬಿಎಸ್ ವೈ

ಲಾಕ್ ಡೌನ್ ನಿಂದ ಕೊರೊನಾ ಪ್ರಕರಣಗಳು ಇಳಿಕೆಯಾಗಿದೆ; ಬಿಎಸ್ ವೈ

ಬೆಂಗಳೂರು: ಕೊರೊನಾ 2ನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಕೈಗೊಂಡ ಕಠಿಣ ಕ್ರಮಗಳಿಂದಾಗಿ ಕೊರೊನಾ ಪಾಸಿಟಿವ್ ಕೇಸ್ ಗಳು ಇಳಿಮುಖವಾಗುತ್ತಿರುವುದು ಸಮಾಧಾನಕರ ಸಂಗತಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನೆಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಗಳ ಬಗ್ಗೆ ಮಾಹಿತಿ ನೀಡಿದರು. ಆರಂಭದ ದಿನಗಳಲ್ಲಿ ರಾಜ್ಯದಲ್ಲಿ 50,112 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗುತ್ತಿದ್ದವು. ನಿನ್ನೆ 39 ಸಾವಿರಕ್ಕೆ ಇಳಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೇ 5ರಂದು 23,106 ಪ್ರಕರಣ ಪತ್ತೆಯಾಗಿದ್ದವು. ನಿನ್ನೆ 16 ಸಾವಿರಕ್ಕೆ ಇಳಿದಿದೆ. ರಾಜ್ಯದಲ್ಲಿ ಕೈಗೊಂಡ ಕಠಿಣ ಕ್ರಮದಿಂದಾಗಿ ಕೋವಿಡ್ ಕೇಸ್ ಗಳು ಕಡಿಮೆಯಾಗುತ್ತಿರುವುದು ಸಮಾಧಾನಕರ ಎಂದು ಹೇಳಿದರು.

ರಾಜ್ಯದಲ್ಲಿ ಆಕ್ಸಿಜನ್ ಉತ್ಪಾದನೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದ್ದು, 120 ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಿಸಲಾಗುತ್ತಿದೆ. ಆಸ್ಪತ್ರೆಗಳಲ್ಲಿ ಮೂಲಸೌಕರ್ಯಗಳನ್ನು ಒದಗಿಸಲಾಗಿದ್ದು, 10,000 ಆಕ್ಸಿಜನ್ ಸಿಲಿಂಡರ್ ಖರೀದಿಗೆ ತೀರ್ಮಾನಿಸಲಾಗಿದೆ. ಇನ್ನೂ 7,೦೦೦ ಆಕ್ಸಿಜನ್ ಕಾನ್ಸಂಟ್ರೇಟರ್ ಹೆಚ್ಚಿಸಲಾಗುವುದು ಎಂದರು.

3 ಕೋಟಿ ಲಸಿಕೆ ಖರೀದಿಗೆ ಆರ್ಡರ್ ನೀಡಲಾಗಿದೆ. 1.10 ಕೋಟಿ ಡೋಸ್ ಲಸಿಕೆಯನ್ನು ಕೇಂದ್ರ ಸರ್ಕಾರ ನೀಡಿದೆ. 18-44 ವರ್ಷದ ವರೆಗಿನವರಿಗೆ ಲಸಿಕೆ ನೀಡಿಕೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ವಿವರಿಸಿದರು.

, ,

Leave a Reply

Your email address will not be published. Required fields are marked *