ಕೊರೋನಾ ದಾಖಲೆ: ರಾಜ್ಯಾದ್ಯಂತ ನಿನ್ನೆ 416 ಮಂದಿಗೆ ಸೋಂಕು, 9 ಮಂದಿ ಸಾವು

ಬೆಂಗಳೂರು: ಕರ್ನಾಟಕದಲ್ಲಿ ನಿನ್ನೆ 416 ಜನರಿಗೆ ಕೊರೋನಾ ವೈರಸ್ ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8697ಕ್ಕೆ ಏರಿಕೆಯಾಗಿದೆ.

ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ಕ್ ಬುಲೆಟಿನ್ ನಲ್ಲಿ ಈ ಬಗ್ಗೆ ಮಾಹಿತಿ ಲಭಿಸಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಒಟ್ಟು 416 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 8697ಕ್ಕೇರಿಕೆಯಾಗಿದೆ.

ಅಂತೆಯೇ  9 ಮಂದಿ ಸೋಂಕಿತರು ಮೃತಪಟ್ಟಿದ್ದು, ಇಲ್ಲಿಯವರೆಗೆ 136 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 181 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 5391 ಮಂದಿ ಚೇತರಿಕೆ ಕಂಡಿದ್ದು, 3170 ಸಕ್ರಿಯ ಪ್ರಕರಣಗಳಿವೆ.

Leave a Reply

Your email address will not be published. Required fields are marked *