ವಿಧಾನ ಪರಿಷತ್‌ಗೆ ಏಳು ಮಂದಿ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಏಳು ಮಂದಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೋಮವಾರ ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನವಾಗಿತ್ತು. ಇಬ್ಬರು ಪಕ್ಷೇತರರ ನಾಮಪತ್ರಗಳು ತಿರಸ್ಕೃತಗೊಂಡಿದ್ದು, ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಏಳು ಅಭ್ಯರ್ಥಿಗಳ ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಬಿಜೆಪಿಯ ಸುನಿಲ್‌ ವಲ್ಯಾಪುರೆ, ಪ್ರತಾಪ್‌ ಸಿಂಹ ನಾಯಕ್‌, ಎಂ.ಟಿ.ಬಿ. ನಾಗರಾಜ್‌ ಮತ್ತು ಆರ್‌. ಶಂಕರ್‌, ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್‌ ಮತ್ತು ನಸೀರ್‌ ಅಹಮದ್‌ ಹಾಗೂ ಜೆಡಿಎಸ್‌ನ ಗೊಂವಿಂದರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *