ಶಿಕಾರಿಪುರ ತಾಲೂಕಿನ ಅಂಬಾರಕೊಪ್ಪ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಕಳೆದ ತಿಂಗಳು ನಿಶ್ಚಿತಾರ್ಥ ಆಗಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದ ಜೋಡಿ ಮೃತಪಟ್ಟಿದೆ.
ಬೈಕ್‌ನಲ್ಲಿ ತೆರಳುತ್ತಿರುವಾಗ ಅಪಘಾತ ಸಂಭವಿಸಿದ್ದು, ಬಸವನಗೌಡ (24) ಹಾಗೂ ರೇಖಾ (22) ಮೃತಪಟ್ಟವರು. ಈ ಜೋಡಿಗೆ ಶ್ರಾವಣ ಮಾಸದಲ್ಲಿ ನಿಶ್ಚಿತಾರ್ಥವಾಗಿತ್ತು. ರೇಖಾ ಶಿಕಾರಿಪುರ ತಾಲೂಕು ಮತ್ತಿಕೋಟೆ ಗ್ರಾಮದ ನಿವಾಸಿ. ಬಸವನಗೌಡ( 24) ಸೊರಬ ತಾಲೂಕು ಗಂಗೊಳ್ಳಿ ಗ್ರಾಮದ ನಿವಾಸಿ. ರೇಖಾ ಮನೆಗೆ ಬಂದಿದ್ದ ಬಸವನಗೌಡ ಆಕೆಯೊಂದಿಗೆ ತೊಗರ್ಸಿ ದೇವಸ್ಥಾನಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ದುರಂತ ನಡೆದಿದೆ.
ಶಿಕಾರಿಪುರದ ಅಂಬಾರಕೊಪ್ಪ ಕ್ರಾಸ್ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಮುಂಭಾಗದಲ್ಲಿ ವೇಗವಾಗಿ ಬರುತ್ತಿದ್ದ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ನಿವೃತ್ತ ಎಸಿಪಿ ಮೇಲೆ ಹಲ್ಲೆಗೈದು ಚಿನ್ನ ದೋಚಿದ್ದ ಕಳ್ಳರು ಅರೆಸ್ಟ್
ಬೆಂಗಳೂರಿನ ಹೆಬ್ಬಾಳದ ವೆಟರ್ನರಿ ಆಸ್ಪತ್ರೆಯ ಆವರಣದಲ್ಲಿ ಕೆಲವು ದಿನಗಳ ಹಿಂದೆ ನಿವೃತ್ತ ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ಎಚ್. ಸುಬ್ಬಣ್ಣ ಮೇಲೆ ಇಬ್ಬರು ಹಲ್ಲೆ ನಡೆಸಿ ಚಿನ್ನದ ಸರ ಮತ್ತು ಬ್ರೇಸ್‌ಲೇಟ್‌ಗಳನ್ನು ಕಸಿದುಕೊಂಡು ಪರಾರಿ ಪ್ರಕರಣದಲ್ಲಿ ಸಂಜಯ್ ನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸುಬ್ಬಣ್ಣ ಎಂದಿನಂತೆ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದಾಗ ಹೆಬ್ಬಾಳದ ವೆಟರ್ನರಿ ಆಸ್ಪತ್ರೆಯ ಆವರಣದಲ್ಲಿ ಇಬ್ಬರು ಮುಖಕ್ಕೆ ಕಪ್ಪು ಬಟ್ಟೆ ಧರಿಸಿದವರು ದಾಳಿ ನಡೆಸಿ ಹಲ್ಲೆ ಮಾಡಿ ಕೈಯಲ್ಲಿದ್ದ ಚಿನ್ನದ ಸರ ಮತ್ತು ಬ್ರೇಸ್‌ಲೇಟ್‌ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು.
ಸುಬ್ಬಣ್ಣ ಅವರು ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಚಿನ್ನಾಭರಣಗಳನ್ನು ವಶಪಡಿಸಿ, ಉಳಿದ ಆರೋಪಿಗಳ ಹುಡುಕಾಟ ನಡೆಸುತ್ತಿದ್ದಾರೆ.