ಒಲಿಂಪಿಕ್ಸ್ ವೀಕ್ಷಿಸಲು ಕುಸ್ತಿಪಟು ಸುಶೀಲ್‌ ಕುಮಾರ್‌ ಗೆ ಕೋರ್ಟ್‌ ಅವಕಾಶ

ಒಲಿಂಪಿಕ್ಸ್ ವೀಕ್ಷಿಸಲು ಕುಸ್ತಿಪಟು ಸುಶೀಲ್‌ ಕುಮಾರ್‌ ಗೆ ಕೋರ್ಟ್‌ ಅವಕಾಶ


ನವದೆಹಲಿ. ಜುಲೈ 22 ಎಲ್ಲವೂ ಅಂದು ಕೊಂಡಂತೆ ನಡೆದಿದ್ದರೆ ಈ ಬಾರಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕುಸ್ತಿಪಟು ಸುಶೀಲ್ ಕುಮಾರ್ ಭಾಗವಹಿಸಬೇಕಾಗಿತ್ತು. ಆದರೆ, ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪ್ರಸ್ತುತ ತಿಹಾರ್ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ.

ಕುಸ್ತಿ ತಾರೆ, ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಏಕೈಕ ಭಾರತೀಯ ಕ್ರೀಡಾಪಟುವಾಗಿರುವ ಸುಶೀಲ್ ಕುಮಾರ್ , ತನಗೆ ಒಲಿಂಪಿಕ್ಸ್ ಕ್ರೀಡೆಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕುಸ್ತಿಪಟು ಮಾಡಿಕೊಂಡ ಮನವಿಯನ್ನು ನ್ಯಾಯಲಯ ಮಾನ್ಯಮಾಡಿದೆ. ನ್ಯಾಯಾಲಯದ ಆದೇಶದಂತೆ ಜೈಲಿನ ಅಧಿಕಾರಿಗಳು ಆತನಿಗೆ ಟಿವಿ ಹಂಚಿಕೆ ಮಾಡಿದ್ದಾರೆ. ಮೇ 23 ರಂದು ಯುವ ಕುಸ್ತಿಪಟು ಸಾಗರ್ ರಾಣಾ ಹತ್ಯೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಆರೋಪಿಯಾಗಿದ್ದಾರೆ. ಕೆಲ ಕಾಲ ನಾಪತ್ತೆಯಾಗಿದ್ದ ಸುಶೀಲ್‌ನನ್ನು ನಂತರ ಪೊಲೀಸರು ಬಂಧಿಸಿದ್ದರು.

, ,

Leave a Reply

Your email address will not be published. Required fields are marked *