ಕೊರೊನಾ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 22,771 ಜನರಿಗೆ ಸೋಂಕು, 442 ಸಾವು

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಒಂದೇ ದಿನದಲ್ಲಿ ಬರೋಬ್ಬರಿ 22 ಸಾವಿರ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 648315 ರಷ್ಟು ಹೆಚ್ಚಾಗಿದೆ. ಚೇತರಿಕೆ ಪ್ರಮಾಣ ಶೇ.60.8ರಷ್ಟಿದೆ.ಕಳೆದ 24 ಗಂಟೆಗಳಲ್ಲಿ 442 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 235433 ಸಕ್ರಿಯ ಪ್ರಕರಣಗಳಿವೆ.394227 ಮಂದಿ ಗುಣಮುಖರಾಗಿದ್ದಾರೆ. 18655 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *