ನಾಲ್ಕೈದು ವರ್ಷದ ಹಿಂದೆ ಜಗತ್ತನ್ನೇ ತಲ್ಲಣಗೊಳಿಸಿದ್ದ ಕೋವಿಡ್ ಮತ್ತೆ ಸದ್ದು ಮಾಡುತ್ತಿದೆ. ಚೀನಾ ಮತ್ತು ಹಾಂಗ್ ಕಾಂಗ್ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವಂತೆಯೇ ಭಾರತದಲ್ಲೂ ಪತ್ತೆಯಾಗಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನ ಮಲ್ಲೇಶ್ವರಂ, ರಾಜಾಜಿನಗರದ ಇಬ್ಬರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಮಲ್ಲೇಶ್ವರಂನ 45 ವರ್ಷದ ವ್ಯಕ್ತಿಗೆ ಹಾಗೂ ರಾಜಾಜಿನಗರದ 38 ವರ್ಷದ ವ್ಯಕ್ತಿಗೆ ಪಾಸಿಟಿವ್ ಕಾಣಿಸಿಕೊಂಡಿದ್ದು, ಇವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ ಎಂಬುದೇ ವಿಶೇಷ. ಇಬ್ಬರನ್ನೂ ಹೋಂ ಐಸೋಲೇಷನ್ನಲ್ಲಿ ಇರಿಸಲಾಗಿದೆ.
ವೈಟ್ಫೀಲ್ಡ್ನ 84 ವರ್ಷದ ವೃದ್ಧರೊಬ್ಬರು ಕೋವಿಡ್ಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 38 ಸಕ್ರಿಯ ಕೋವಿಡ್ ಪ್ರಕರಣಗಹಳಿದ್ದು, ಬೆಂಗಳೂರಿನಲ್ಲಿ 9 ತಿಂಗಳ ಮಗು ಸೇರಿ ಒಟ್ಟು ಮೂರು ಮಕ್ಕಳಿಗೆ ಕೋವಿಡ್ ಪಾಸಿಟಿವ್ಇದೆ. ಶನಿವಾರ ರಾಜ್ಯದಲ್ಲಿ 108 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಐವರಿಗೆ ಕೋವಿಡ್ ಪತ್ತೆಯಾಗಿದೆ. ಬೆಂಗಳೂರಲ್ಲಿ 2, ಮೈಸೂರು 2 ಹಾಗೂ ವಿಜಯನಗರದಲ್ಲಿ ಕೋವಿಡ್ ಕೇಸ್ ಪತ್ತೆಯಾಗಿದೆ.