Menu

ದೇಶದಲ್ಲಿ 7400 ದಾಟಿದ ಕೋವಿಡ್ ಸೋಂಕಿತರು: ರಾಜ್ಯದಲ್ಲೇ ಅತೀ ಹೆಚ್ಚು ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 269 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 9 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಅನ್ವಯ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 7400 ಗಡಿ ದಾಟಿದೆ. ಜನವರಿ 1ರಿಂದ ಇಲ್ಲಿಯವರೆಗೆ ಕೊರೊನಾಗೆ 87 ಮಂದಿ ಮೃತಪಟ್ಟಿದ್ದಾರೆ.

ಕರ್ನಾಟಕದಲ್ಲಿ ಅತೀ ಹೆಚ್ಚು 132 ಸೋಂಕು ಪ್ರಕರಣಗಳು ಕಳೆದ 24 ಗಂಟೆಯಲ್ಲಿ ದೃಢಪಟ್ಟಿದೆ. ಗುಜರಾತ್ ನಲ್ಲಿ 79, ಕೇರಳದಲ್ಲಿ 54, ಮಧ್ಯಪ್ರದೇಶ 20, ಸಿಕ್ಕಿಂ 11, ತಮಿಳುನಾಡು 12 ಮತ್ತು ಹರಿಯಾಣದಲ್ಲಿ ಒಂದು ದಿನದಲ್ಲಿ ಸೋಂಕು ಪ್ರಕರಣಗಳು ಕಾಣಿಸಿಕೊಂಡಿವೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ 4 ಮಂದಿ ಸೋಂಕಿಗೆ ಬಲಿಯಾಗಿದ್ದರೆ, ಕೇರಳದಲ್ಲಿ ಮೂರು, ರಾಜಸ್ಥಾನ, ಮತ್ತು ತಮಿಳುನಾಡಿನಲ್ಲಿ ತಲಾ ಒಬ್ಬರು ಅಸುನೀಗಿದ್ದಾರೆ. ಕಳೆದ 24 ಗಂಟೆಯಲ್ಲಿ 991 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರಿಂದ ಒಟ್ಟಾರೆ ಚೇತರಿಕೆ ಕಂಡ ಸೋಂಕಿತರ ಸಂಖ್ಯೆ 11,967ಕ್ಕೆ ಏರಿಕೆಯಾಗಿದೆ.

Related Posts

Leave a Reply

Your email address will not be published. Required fields are marked *