ಹೊಸದಿಲ್ಲಿ,ಜ.25,ಉದಯಕಾಲ: ಭಾರತದಲ್ಲಿ ಕೊರೊನಾ ವೈರಸ್ನ ಹೊಸ ಪ್ರಕರಣಗಳಲ್ಲಿ ಶೇಕಡಾ 16.4 ರಷ್ಟು ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 2,55,874 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಸೋಮವಾರ 3,06,064 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಇನ್ನು ಇದೇ ಸಂದರ್ಭದಲ್ಲಿ ದೈನಂದಿನ ಸೋಂಕಿನ ಪ್ರಮಾಣವು 15.52%ಕ್ಕೆ ಇಳಿಕೆಯಾಗಿದೆ. ಸೋಮವಾರದ ಸೋಂಕಿನ ಪ್ರಮಾಣ 20.75%, ಆ್ಯಕ್ಟಿವ್ ಕೇಸ್ ಗಳ ಸಂಖ್ಯೆ 22,36,842ಕ್ಕೆ ತಲುಪಿದೆ.
ಇನ್ನು ದೇಶದಲ್ಲಿ ಕೊರೊನಾದಿಂದ ಚೇತರಿಸಿಕೊಳ್ಳುವ (Recovery Rate) ಪ್ರಮಾಣ 93.15% ಆಗಿದೆ. ಕಳೆದ 24 ಗಂಟೆಗಳಲ್ಲಿ 2,67,753 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಒಟ್ಟಾರೆ, ಕೊರೊನಾದಿಂದ ಚೇತರಿಸಿಕೊಂಡವರ ಸಂಖ್ಯೆ 3,70,71,898ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನಿಂದ 614 ಮಂದಿ ಸಾವಿಗೀಡಾಗಿದ್ದಾರೆ.
ಈ ಮಧ್ಯೆ, ಕಳೆದ 24 ಗಂಟೆಗಳಲ್ಲಿ 62,29,956 ಡೋಸ್ ಕೊರೊನಾ ಲಸಿಕೆಗಳನ್ನು ನೀಡಲಾಗಿದೆ. ಒಟ್ಟು ಲಸಿಕೆ ಪಡೆದವರ ಸಂಖ್ಯೆ 1,62,92,09,308ಕ್ಕೆ ಏರಿದೆ.
