Menu

Covid: ಹುಬ್ಬಳ್ಳಿ, ಮಂಡ್ಯದಲ್ಲೂ ಕೋವಿಡ್‌ ಸೋಂಕು ಪತ್ತೆ

ರಾಜ್ಯದಲ್ಲಿ ಕೋವಿಡ್‌ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೋನ ದೃಢಪಟ್ಟಿದೆ. ಮಂಡ್ಯದಲ್ಲೂ ಈ ಬಾರಿಯ ಮೊದಲ ಸೋಂಕು ಪತ್ತೆಯಾಗಿದೆ.

ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದ 11 ತಿಂಗಳ ಮಗುವಿಗೆ ಸೋಂಕು ಕಾಣಿಸಿಕೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿಗೆ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಕೊಡಿಸಲು ಹೋದಾಗ ಕೋವಿಡ್‌ ಪತ್ತೆಯಾಗಿದೆ. ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ಧಾರವಾಡ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಮಂಡ್ಯದಲ್ಲಿ 60 ವರ್ಷದ ವೃದ್ಧೆಯಲ್ಲಿ ಮೊದಲ ಕೇಸ್‌ ಪತ್ತೆಯಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಹರಕೆರೆ ಗ್ರಾಮದ ಕಲ್ಯಾಣಮ್ಮ ಎಂಬವರಿಗೆ ಸೋಂಕು ಕಾಣಿಸಿಕೊಂಡಿದೆ. ಮನೆಯಲ್ಲೇ ಕಲ್ಯಾಣಮ್ಮ, ಕಳೆದ 2 ದಿನಗಳಿಂದ ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದರು. ಪರೀಕ್ಷೆ ವೇಳೆ ಸೋಂಕು ದೃಢಪಟ್ಟಿದ್ದು, ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನಿಲ್ಲ, ಹಿಂದೆ ಏನು ಸೂಚನೆ ಕೊಟ್ಟಿದ್ದೆವೊ ಅಷ್ಟೆ‌. ಕೇಂದ್ರ ಸರ್ಕಾರ ಇದು ಅಪಾಯಕಾರಿ ಅಲ್ಲ ಅಂತ ಹೇಳಿದೆ. ಸಣ್ಣ ಪ್ರಮಾಣದಲ್ಲಿ ತೊಂದರೆ ಆಗಬಹುದೇ ಹೊರತು ಅಪಾಯಕಾರಿ ಅಲ್ಲ ಎಂದು ವಿಶ್ಲೇಷಣೆ ಮಾಡಿದ್ದಾರೆ. ಜನ ಆತಂಕಪಡುವ ಅಗತ್ಯವಿಲ್ಲ. ರೋಗನಿರೋಧಕ ಶಕ್ತಿ ಕಡಿಮೆ ಇದ್ದವರು ಎಚ್ಚರಿಕೆಯಿಂದ ಇರಬೇಕು. ಬೇರೆ ಕಾಯಿಲೆ ಇದ್ದಾಗ ಇದು ಸಮಸ್ಯೆ ಆಗಬಹುದು, ಸ್ವಲ್ಪ ಎಚ್ಚರಿಕೆಯಿಂದ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಲಹೆ ನೀಡಿದ್ದಾರೆ.

Related Posts

Leave a Reply

Your email address will not be published. Required fields are marked *