Saturday, September 13, 2025
Menu

ಸಿಪಿ ರಾಧಾಕೃಷ್ಣನ್ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕಾರ

ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ರಾಜನಾಥ್‌ ಸಿಂಗ್‌, ನಿರ್ಗಮಿತ ರಾಜ್ಯಪಾಲರಾದ ಜಗದೀಪ್‌ ಧನ್ಕರ್‌ ಸೇರಿದಂತೆ ಗಣ್ಯರ ಸಮ್ಮುಖ ಇಂದು ಪ್ರಮಾಣವಚನ ಸ್ವೀಕರಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಧಾಕೃಷ್ಣನ್ ಅವರಿಗೆ ಪ್ರಮಾಣವಚನ ಬೋಧಿಸಿದರು. ರಾಜೀನಾಮೆ ನೀಡಿದ್ದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷ. ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ, ಜಾರ್ಖಂಡ್‌ ರಾಜ್ಯಪಾಲ ಸಂತೋಷ್ ಗಂಗ್ವಾರ್ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಜಗದೀಪ್ ಧನ್ಕರ್ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಿ.ಪಿ ರಾಧಾಕೃಷ್ಣನ್ 452 ಮೊದಲ ಪ್ರಾಶಸ್ತ್ಯದ ಮತ ಪಡೆದು ಗೆದ್ದರೆ, ಪ್ರತಿಸ್ಪರ್ಧಿ ಸುರ್ದಶನ್‌ ರೆಡ್ಡಿ 300 ಮತಗಳನ್ನು ಪಡೆದುಕೊಂಡಿದ್ದರು.
ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ತಮಿಳುನಾಡಿನ ತಿರುಪ್ಪೂರಿನ ಕೊಂಗು ವೆಲ್ಲಲರ್ ಗೌಂಡರ್ ಸಮುದಾಯದಲ್ಲಿ ಜನಿಸಿದರು. ತೂತುಕುಡಿ ವಿಒ ಚಿದಂಬರಂ ಕಾಲೇಜಿನಿಂದ ವ್ಯವಹಾರ ಆಡಳಿತದಲ್ಲಿ ಪದವಿ (ಬಿಬಿಎ) ಪಡೆದರು. ರಾಧಾಕೃಷ್ಣನ್ ಭಾರತೀಯ ಜನಸಂಘ ಮತ್ತು ಆರೆಸ್ಸೆಸ್‌ನಲ್ಲಿ ಸಕ್ರಿಯವಾಗಿದ್ದರು.

ರಾಧಾಕೃಷ್ಣನ್ ಅವರು 1998 ಮತ್ತು 1999 ರಲ್ಲಿ ಎರಡು ಬಾರಿ ಸಂಸದರಾಗಿ ಲೋಕಸಭೆಯಲ್ಲಿ ಕೊಯಮತ್ತೂರು ಪ್ರತಿನಿಧಿಸಿದ್ದರು. 2004 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಗೆ ಭಾರತೀಯ ಶಾಸಕಾಂಗ ನಿಯೋಗದ ಸದಸ್ಯರಾಗಿದ್ದರು, 2004 ರಿಂದ 2007 ರವರೆಗೆ ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿದ್ದರು. ಫೆಬ್ರವರಿ 2023 ರಲ್ಲಿ ರಾಧಾಕೃಷ್ಣನ್ ಅವರನ್ನು ಜಾರ್ಖಂಡ್ , ಜುಲೈ 2024 ರಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾದರು. ತೆಲಂಗಾಣದ ರಾಜ್ಯಪಾಲ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿಯೂ ಕೆಲಸ ಮಾಡಿದ್ದರು.

Related Posts

Leave a Reply

Your email address will not be published. Required fields are marked *