Menu

ಸೈಬರ್‌ ವಂಚನೆ: 15 ಕೋಟಿ ರೂ. ಕಳೆದುಕೊಂಡ ಉದ್ಯಮಿ

Cyber fraud

ವೃದ್ಧ ಉದ್ಯಮಿಯೊಬ್ಬರು ಸೈಬರ್‌ ವಂಚಕರ ಜಾಲಕ್ಕೆ ಸಿಲುಕಿ ೧5 ಕೋಟಿ ರೂ. ಕಳೆದುಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಉದ್ಯಮಿಗೆ ವಿಡಿಯೋ ಕಾಲ್ ಮಾಡಿದ್ದ ಸೈಬರ್‌ ವಂಚಕರು, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಫ್ರಾಡ್‌ ಲಿಸ್ಟ್‌ನಲ್ಲಿ ತೋರಿಸುತ್ತಿದೆ. ನೀವು ಮನಿ ಲಾಡ್ರಿಂಗ್ ಮಾಡ್ತಿದ್ದೀರಿ ಎಂದು ಬೆದರಿಸಿ ನಿಮ್ಮ ಹಣ ಬೇರೆ ಖಾತೆಗೆ ವರ್ಗಾಯಿಸಿ ಎಂದು ಅಕೌಂಟ್ ನಂಬರ್ ಕೊಟ್ಟಿದ್ದಾರೆ. ತನಿಖೆ ಮುಗಿದ ಬಳಿಕ ನಿಮ್ಮ ಹಣ ಮರಳಿಸುತ್ತೇವೆ ಎಂದು ನಂಬಿಸಿದ್ದಾರೆ.

ವಂಚಕರ ಮಾತು ನಂಬಿ ಹೆದರಿದ ಉದ್ಯಮಿ, ಹಂತ ಹಂತವಾಗಿ 15 ಕೋಟಿ ಹಣ ಬೇರೆ ಅಕೌಂಟ್‌ಗೆ ಹಾಕಿದ್ದಾರೆ. ಬಳಿಕ ಕರೆ ಮಾಡಿದವರು ಸಂಪರ್ಕಕ್ಕೆ ಸಿಗದೇ ಇದ್ದಾಗ ಉದ್ಯಮಿಗೆ ಅನುಮಾನ ಬಂದಿದೆ. ಬೆಳಗಾವಿ ನಗರ ಸಿಇಎನ್ ಠಾಣೆಗೆ ದೂರು ನೀಡಿದ ಬಳಿಕ ಪೊಲೀಸರು ಸೈಬರ್ ವಂಚಕರ ಅಕೌಂಟ್ ಪ್ರೀಜ್ ಮಾಡಿದ್ದಾರೆ. ಆ ಖಾತೆಯಲ್ಲಿ ೯೦ ಲಕ್ಷ ಮಾತ್ರ ಇದೆ. ಸೈಬರ್ ವಂಚಕರ ಬಂಧನಕ್ಕೆ ಬೆಳಗಾವಿ ‌ಪೊಲೀಸ್ ಕಮಿಷನರ್‌ ವಿಶೇಷ ತಂಡ ರಚಿಸಿದ್ದಾರೆ. ಸೈಬರ್ ವಂಚಕರ ಬೆದರಿಕೆಗೆ ಹೆದರದೆ ಸಂತ್ರಸ್ತರು ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್‌ ಉರುಳಿ ಎಂಟು ಮಂದಿಗೆ ಗಾಯ

ಚಿಕ್ಕಮಗಳೂರಿನ ಕುಕ್ಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಉರುಳಿದೆ. ಘಟನೆಯಲ್ಲಿ ಎಂಟು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್‍ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Posts

Leave a Reply

Your email address will not be published. Required fields are marked *