Saturday, October 03, 2026
Menu

ನಗರದಲ್ಲಿ ಭೀಕರ ಸಿಲಿಂಡರ್ ಸ್ಫೋಟ: 6 ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ನಗರದಲ್ಲಿ ಭೀಕರ ಸಿಲಿಂಡರ್ ಸ್ಫೋಟ: 6 ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ನಗರದ ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಅನಿರೀಕ್ಷಿತವಾಗಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು (Cylinder Blast), ಒಂದೇ ಕುಟುಂಬದ ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ವರದಿಯಾಗಿದೆ.ರಾಯಚೂರು ಮೂಲದ ಈ ಕುಟುಂಬವು ಬದುಕು ಕಟ್ಟಿಕೊಳ್ಳಲು ಬೆಂಗಳೂರಿಗೆ ಬಂದು ನಾಯಂಡಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಸಂತ್ರಸ್ತ ಕುಟುಂಬದ ಮುಖ್ಯಸ್ಥ ಕರಿಲಿಂಗಪ್ಪ ಕೂಲಿ ಕೆಲಸ ಮಾಡಿಕೊಂಡಿದ್ದಾರೆ.

ಬೆಳಗ್ಗೆ ಸುಮಾರು 6 ಗಂಟೆ ಸುಮಾರಿಗೆ ಮನೆಯಲ್ಲಿ ಎಲ್ಲರೂ ಇದ್ದ ವೇಳೆ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ದಂಪತಿ ಹಾಗೂ ನಾಲ್ವರು ಮಕ್ಕಳು ಸೇರಿದಂತೆ ಒಟ್ಟು ಆರು ಜನ ಗಾಯಗೊಂಡಿದ್ದಾರೆ.ಗಾಯಗೊಂಡವರು ಕರಿಲಿಂಗಪ್ಪ (40), ಲಕ್ಷ್ಮಮ್ಮ (43) (ಸ್ಥಿತಿ ಗಂಭೀರ), ಚೈತ್ರಾ (11),ಬಸವ (9),ಗೀತಾ (3 ವರ್ಷದ ಮಗು),ಗಿರಿಜಾ (3 ವರ್ಷದ ಮಗು) (ಮಗುವಿನ ಸ್ಥಿತಿಯೂ ಗಂಭೀರ)

ಘಟನೆಯಲ್ಲಿ ತೀವ್ರವಾಗಿ ಸುಟ್ಟು ಗಾಯಗೊಂಡಿರುವ ಲಕ್ಷ್ಮಮ್ಮ ಹಾಗೂ ಒಂದು ಚಿಕ್ಕ ಮಗುವಿನ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ತಕ್ಷಣವೇ ಎಚ್ಚೆತ್ತ ಸ್ಥಳೀಯರು ಹಾಗೂ ಪೊಲೀಸರು, ಗಾಯಗೊಂಡ ಒಟ್ಟು 6 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾಯಿಸಿದ್ದು, ಅಲ್ಲಿ ಅವರಿಗೆ ತುರ್ತು ಚಿಕಿತ್ಸೆ ಮುಂದುವರಿದಿದೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.
#BengaluruNews #Nayandahalli #CylinderBlast #VictoriaHospital #AccidentNews #KarnatakaNews #RaichurFamily #UdayakalaNews

Related Posts

Leave a Reply

Your email address will not be published. Required fields are marked *