ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಆಗಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ನಟ ದರ್ಶನ್ ಡೆವಿಲ್ ಸಿನಿಮಾ ಶೂಟಿಂಗಾಗಿ ದುಬೈ ಮತ್ತು ಯೂರೋಪ್‌ಗೆ ತೆರಳಲು ಅನುಮತಿ ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಜೂನ್ 1 ರಿಂದ 25 ರವರೆಗೆ 25 ದಿನ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಿಆರ್‌ಪಿಸಿ ಸೆಕ್ಷನ್ 439(1) (ಬಿ) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ. ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ ವಿದೇಶಕ್ಕೆ ತೆರಳಿದರೆ ಭಾರತಕ್ಕೆ ಮತ್ತೆ ವಾಪಸ್ ಬರುವುದು ಅನುಮಾನ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ನಡೆಯುತ್ತಿರುವುದ್ದರಿಂದ ವಿದೇಶಕ್ಕೆ ತೆರಳಲು ಅನಮತಿ ನೀಡದಂತೆ ವಿಶೇಷ ಸಾರ್ವಜನಿಕ ಅಭಿಯೋಜಕ (ಎಸ್‌ಪಿಪಿ) ಆಕ್ಷೇಪಣೆ ಸಲ್ಲಿಸಿದ್ದಾರೆ. ದರ್ಶನ್ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಕೋರ್ಟ್‌ನಲ್ಲಿ ನಡೆಯಲಿದೆ.