Menu

ಮೈಸೂರಿನಲ್ಲಿ ವಿಷ ಸೇವಿಸಿ ಮದುವೆ ನಿಗದಿಯಾಗಿದ್ದ ಮಗಳು,ತಂದೆ, ತಾಯಿ ಸುಸೈಡ್‌

ಮೈಸೂರು ಟಿ.ನರಸೀಪುರದ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ತಂದೆ, ತಾಯಿ ಮತ್ತು ಮಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಿವಣ್ಣ, ಪತ್ನಿ ನಾಗರತ್ನ ಮತ್ತು ಮಗಳು ರಕ್ಷಿತಾಆತ್ಮಹತ್ಯೆ ಮಾಡಿಕೊಂಡವರು. ಕುಟುಂಬ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳದಲ್ಲಿ ಡೆತ್​ನೋಟ್​​ ಪತ್ತೆಯಾಗಿದೆ. ಅದರಲ್ಲಿ ಸಾವಿಗೆ ಕಾರಣವನ್ನು ಉಲ್ಲೇಖಿಸಲಾಗಿದೆ.

ಶಿವಣ್ಣ ದಂಪತಿಯ ಮಗಳು ರಕ್ಷಿತಾಗೆ ಮದುವೆ ನಿಶ್ಚಯವಾಗಿತ್ತು. ಉಲ್ಲಾಸ್ ಗೌಡ ಎಂಬಾತ ರಕ್ಷಿತಾ ಮೊಬೈಲ್ ಮೆಸೇಜ್‌ಗಳು ಮತ್ತು ಕೆಲವು ಫೋಟೋಗಳನ್ನು ಇಟ್ಟುಕೊಂಡು ಕಿರುಕುಳ ನೀಡುತ್ತಿದ್ದ. ಆತ ಆ ಮೆಸೇಜ್ ಮತ್ತು ಫೋಟೋಗಳನ್ನು ರಕ್ಷಿತಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನಿಗೂ ಕಳುಹಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಕುಟುಂಬ ತುಂಬಾ ನೊಂದು ಆತ್ಮಹತ್ಯೆ ಮಾಡಿಕೊಂಡಿದೆ. ನೋವು, ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್‌ನಲ್ಲಿ ಬರೆಯಲಾಗಿದೆ. ಮೂವರ ಸಾವಿಗೂ ಉಲ್ಲಾಸ್ ಗೌಡನೇ ಕಾರಣ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಪೊಲೀಸರು ಉಲ್ಲಾಸ್ ಗೌಡನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಡೆತ್ ನೋಟ್, ಮೊಬೈಲ್ ಸಂದೇಶಗಳು, ಫೋಟೋಗಳು ಮತ್ತು ಇತರ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ.

ಮದುವೆ ಸಂಭ್ರಮದಲ್ಲಿದ್ದ ಮೊಮ್ಮಗಳ ಜೊತೆ ಅಳಿಯ-ಮಗಳು ಕೂಡ ಪ್ರಾಣ ಕಲೆದುಕೊಂಡಿದ್ದಾರೆ. ಮದುವೆಗೆ ಎಲ್ಲ ಸಿದ್ಧತೆಗಳು ನಡೆದಿತ್ತು. ಉಲ್ಲಾಸ್​​ ಗೌಡ ಮದುವೆ ನಿಲ್ಲಿಸಬೇಕೆಂದು ಮೊಮ್ಮಗಳ ಮರ್ಯಾದೆ ತೆಗೆದಿದ್ದಾನೆ. ಆತ ನನ್ನ ಅಳಿಯನಿಗೆ ಪರಿಚಯಸ್ಥ, ಟ್ರ್ಯಾಕ್ಟರ್ ಓಡಿಸುತ್ತಿದ್ದ, ಆಗಾಗ ಮನೆಗೆ ಬಂದು ಹೋಗುತ್ತಿದ್ದ. ನನ್ನ ಮಗಳು, ಅಳಿಯ ಮತ್ತು ಮೊಮ್ಮಗಳ ಸಾವಿಗೆ ಕಾರಣವಾದ ಉಲ್ಲಾಸ್ ಗೌಡನಿಗೆ ಶಿಕ್ಷೆ ಆಗಬೇಕು ಎಂದು ರಕ್ಷಿತಾಳ ಅಜ್ಜಿ ಚಿನ್ನಮ್ಮ ಒತ್ತಾಯಿಸಿದ್ದಾರೆ.

ಆರೋಪಿ ಉಲ್ಲಾಸ್ ಗೌಡ ಬಂಧನಕ್ಕೆ ಗ್ರಾಮಸ್ಥರು ಪಟ್ಟುಹಿಡಿದಿದ್ದು, ಆರೋಪಿಯನ್ನು ಬಂಧಿಸುವವರೆಗೆ ಮೃತದೇಹಗಳನ್ನು ತೆಗೆದುಕೊಂಡು ಹೋಗದಂತೆ ತಡೆದಿದ್ದಾರೆ. ಪೊಲೀಸರು ಮೃತದೇಹಗಳನ್ನು ಆ್ಯಂಬುಲೆನ್ಸ್​ಗೆ ಶಿಫ್ಟ್ ಮಾಡಿ ಒಯ್ಯುವಾಗ ಗ್ರಾಮಸ್ಥರು ಮುತ್ತಿಗೆ ಹಾಕಿದ್ದಾರೆ.

Related Posts

Leave a Reply

Your email address will not be published. Required fields are marked *