Menu

ದಾವಣಗೆರೆ: 150 ಕೋಟಿ ಕನ್ನ ಹಾಕಿದ ಸೈಬರ್ ವಂಚಕ ಅರೆಸ್ಟ್

cyber davanagere

ಸಿಸಿಟಿವಿ ಕೆಲಸ ಮಾಡಿಕೊಂಡು ದೇಶದ ನಾನಾ ಬ್ಯಾಂಕ್ ಖಾತೆಗಳಿಂದ 150 ಕೋಟಿ ರೂ. ದೋಚಿದ್ದ ಸೈಬರ್ ವಂಚಕನನ್ನು ದಾವಣೆಗೆರೆ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ಟೌನ್ ಶಾಂತಿನಗರ ನಿವಾಸಿ ಸೈಯದ್ ಅರ್ಫಾತ್ (28) ಎಂಬಾತನನ್ನು ಬಂಧಿಸಲಾಗಿದ್ದು, ಈತ ದಾವಣಗೆರೆಯಲ್ಲಿ ಸಿಸಿಟಿವಿ ಕೆಲಸ ಮಾಡಿಕೊಂಡಿದ್ದ.

ಆರೋಪಿಯ ಮೊಬೈಲ್ ವಶಪಡಿಸಿಕೊಂಡು ಪೊಲೀಸರು ಪರಿಶೀಲಿಸಿದಾಗ ಆರೋಪಿ ಖಾತೆಯಲ್ಲಿ 18 ಕೋಟಿ ರೂ. ಪತ್ತೆಯಾಗಿದೆ. ಈತನ ಖಾತೆಯಲ್ಲಿ ಜುಲೈ 27 ರಿಂದ ಆಗಸ್ಟ್ 19 ರವರೆಗೆ ಸುಮಾರು 150 ಕೋಟಿ ರೂ. ಹಣ ಇದ್ದು, ಆರೋಪಿಗಳು 132 ಕೋಟಿ ರೂ. ಹಣ ವಿತ್ ಡ್ರಾ. ಮಾಡಿಕೊಂಡಿದ್ದಾರೆ.

ಆರೋಪಿಗಳು ದಾವಣಗೆರೆ ನಗರದ ನಿಟ್ಟುವಳ್ಳಿ ಕೆನರಾ ಬ್ಯಾಂಕ್ ಖಾತೆಯಿಂದ ಪ್ರಮೋದ್ ಎಂಬುವರ 52,60, 523 ರೂ.ಹಣವನ್ನು ಎಗರಿಸಿದ್ದರು. ಈ ಸಂಬಂಧ ದಾವಣಗೆರೆ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಆರೋಪಿಯ ಮೊಬೈಲ್ ಪರಿಶೀಲನೆ ವೇಳೆ ಬಹುದೊಡ್ಡ ಪ್ರಕರಣದ ರಹಸ್ಯ ಬಯಲಾಗಿದೆ. ಸೈಬರ್ ಕ್ರೈಮ್ ಪೊಲೀಸರ ಸಾಧನೆಗೆ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ ಗಾಜೀಯ ಬಾದ್, ಜಮ್ಮು & ಕಾಶ್ಮೀರದ ಶ್ರೀನಗರ, ಆಂದ್ರ ಪ್ರದೇಶದ ಏಲೂರು, ಮಹರಾಷ್ಟ್ರದ ಮುಂಬೈ ನಗರ, ಬೆಂಗಳೂರು ನಗರ ಹಾಗೂ ದಾವಣಗೆರೆಯ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ಮೊದಲ ಬಾರಿಗೆ ದಾವಣಗೆರೆ ಜಿಲ್ಲೆಯ ಸೈಬರ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಹುದೊಡ್ಡ ಪ್ರಕರಣದ ಆರೋಪಿಯನ್ನು ಬಂಧಿಸಿದ್ದಾರೆ.

Related Posts

Leave a Reply

Your email address will not be published. Required fields are marked *