ದಾವಣಗೆರೆ: ಬಟ್ಟೆ ತೊಳೆಯಲು ಹೋಗಿದ್ದ ಮೂವರು ಮಹಿಳೆಯರು ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಚನ್ನಗಿರಿ ತಾಲ್ಲೂಕಿನ ಲಕ್ಷ್ಮೀಸಾಗರ, ದುಗ್ಗೇನಹಳ್ಳಿ ಗ್ರಾಮಗಳ ಬಳಿ ನಡೆದಿದೆ.
ದುಗ್ಗೇನಹಳ್ಳಿಯ ದೀಪಾ (28), ದಿವ್ಯಾ (೨6) ಹಾಗೂ ಚಂದನಾ (19) ಮೃತ ಮಹಿಳೆಯರು. ಲಕ್ಷ್ಮೀ ಸಾಗರ ಗ್ರಾಮದ ಹೊಸ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಅವಘಡ ಸಂಭವಿಸಿದೆ.
ಸುದ್ದಿ ತಿಳಿಯುತ್ತಿದ್ದಂತೆ ಚನ್ನಗಿರಿ ಅಗ್ನಿಶಾಮಕ ಸಿಬ್ಬಂದಿ ಮೃತದೇಹಗಳನ್ನು ಕೆರೆಯಿಂದ ಮೇಲೆತ್ತಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ತಹಶೀಲ್ದಾರ್ ನಾಗರಾಜ್ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಚನ್ನಗಿರಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.