ಅತಿ ಸುರಕ್ಷಿತ ವಾಹನ ನೋಂದಣಿ ಫಲಕ (HSRP) ಅಳವಡಿಸದ ವಾಹನ ಸವಾರರಿಗೆ ಮತ್ತೆ ರಿಲೀಫ್ ಸಿಕ್ಕಿದೆ.
ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಈ ಹಿಂದೆ ನೀಡಲಾಗಿದ್ದ ಗಡುವನ್ನು ಮತ್ತೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸತತ 8ನೇ ಬಾರಿ ಗಡುವು ವಿಸ್ತರಿಸಿದಂತಾಗಿದೆ.
ನಂಬರ್ ಪ್ಲೇಟ್ ಬದಲಾವಣೆಗೆ ಮಾರ್ಚ್ 31ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ೮ ತಿಂಗಳ ಕಾಲ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಆದಂತಾಗಿದೆ.
ಸಾರಿಗೆ ಇಲಾಖೆಗೆ ಅಧೀನ ಕಾರ್ಯದರ್ಶಿ ಪುಷ್ಪ ಶುಕ್ರವಾರ ಆದೇಶ ಹೊರಡಿಸಿದ್ದು, ಈ ಹಿಂದೆ ನೀಡಲಾಗಿದ್ದ ಗಡುವನ್ನು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ವಾಹನ ಸವಾರರು ನಿರಾಸಕ್ತಿ ತೋರುತ್ತಿದ್ದಾರೆ. ಮೂಲಗಳ ಪ್ರಕಾರ ಶೇ.೫೦ಕ್ಕೂ ಹೆಚ್ಚು ವಾಹನಗಳು ಹೊಸ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳದೇ ಇರುವುದು ಸರ್ಕಾರಕ್ಕೆ ತಲೆ ನೋವಾಗಿದೆ.