Menu

ತೆಲಂಗಾಣ ಔಷಧ ಕಾರ್ಖಾನೆಯಲ್ಲಿ ಸ್ಫೋಟಕ್ಕೆ ಬಲಿಯಾದವರ ಸಂಖ್ಯೆ 35ಕ್ಕೆ ಏರಿಕೆ

ತೆಲಂಗಾಣದ ಸಂಗರೆಡ್ಡಿಯಲ್ಲಿರುವ ಔಷಧ ಕಾರ್ಖಾನೆಯಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆ ಆಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

31 ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಚರಣೆ ಮುಂದುವರಿದಿದೆ. ಕೆಲವರ ದೇಹ ಸಂಪೂರ್ಣ ಸುಟ್ಟುಹೋಗಿದ್ದು, ಗುರುತು ಪತ್ತೆಹಚ್ಚಲು ಡಿಎನ್‌ಎ ಟೆಸ್ಟ್ ಮಾಡಲಾಗುವುದು ಎಂದು ಐಜಿಪಿ ವಿ.ಸತ್ಯನಾರಾಯಣ್ ತಿಳಿಸಿದ್ದಾರೆ.

ಕಾರ್ಖಾನೆಯ ರಿಯಾಕ್ಟರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಸ್ಫೋಟದ ತೀವ್ರತೆಗೆ ಕಾರ್ಮಿಕರ ಮೃತದೇಹಗಳು 100 ಮೀಟರ್ ದೂರಕ್ಕೆ ಹಾರಿಬಿದ್ದಿವೆ. ಕೆಲವರು ಕಾರ್ಖಾನೆಯ ಒಳಗೆ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ.

ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ತೆಲಂಗಾಣದ ಸಂಗರೆಡ್ಡಿಯಲ್ಲಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕಾರ್ಮಿಕರು ಮೃತಪಟ್ಟಿರುವುದಕ್ಕೆ ದುಃಖವಾಗಿದೆ. ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಮೃತರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Related Posts

Leave a Reply

Your email address will not be published. Required fields are marked *