
ನವದೆಹಲಿ: ಜುಲೈ 08 ಶುಕ್ರವಾರ ನಡೆದ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಜಪಾನಿನ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡು ಹಾರಿಸಿರುವ ಘಟನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಖಂಡಿಸಿದ್ದು ತುಂಬಾ ದುಃಖಿತನಾಗಿದ್ದೇನೆ ಎಂದಿದ್ದಾರೆ.
ನನ್ನ ಆತ್ಮೀಯ ಸ್ನೇಹಿತ ಶಿಂಜೋ ಅಬೆ ಮೇಲಿನ ದಾಳಿಯಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ.ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಅವರು, ಅವರ ಕುಟುಂಬ ಮತ್ತು ಜಪಾನ್ ಜನರೊಂದಿಗೆ ಇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Share on:
WhatsApp