Menu

ವಿಳಂಬ ನೀತಿ ಭ್ರಷ್ಟಾಚಾರಕ್ಕೆ ದಾರಿ, ಮಧ್ಯವರ್ತಿಗಳನ್ನು ದೂರವಿಡಿ: ಅಧಿಕಾರಿಗಳಿಗೆ ಸಿಎಂ ಸಲಹೆ

ಮಧ್ಯವರ್ತಿಗಳು ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಒಕ್ಕೂಟ ಸಂಘ ಬೆಂಗಳೂರುವತಿಯಿಂದ ಇನ್ ಫೆಂಟ್ರಿ ರಸ್ತೆಯಲ್ಲಿರುವ KAS ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಹೊಸದಾಗಿ ನಿರ್ಮಿಸಿದ ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಿಸಿ  ಸ್ಮರಣ ಸಂಚಿಕೆ  ಬಿಡುಗಡೆ ಮಾಡಿ ಮಾತನಾಡಿದರು.

ಅಧಿಕಾರಿಗಳು ಯಾವುದೇ ಕಾರಣಕ್ಕೂ ಮಾಡದೇ, ಶೀಘ್ರವಾಗಿ ಕಡತಗಳನ್ನು ವಿಲೇವಾರಿ ಮಾಡಬೇಕು. ವಿಳಂಬ ನೀತಿ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತದೆ ಎಂದರು. ಕೆಎಎಸ್ ಅಧಿಕಾರಿಗಳು  ಕರ್ತವ್ಯವನ್ನು ನಿಷ್ಠೆಯಿಂದ ಪ್ರಾಮಾಣಿಕವಾಗಿ ಮಾಡಬೇಕು. ಕೆಎಎಸ್ ಅಧಿಕಾರಿಗಳ ಸಂಘಕ್ಕೆ ನೂರು ವರ್ಷಗಳ ಇತಿಹಾಸವಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ರಾಜ್ಯಕ್ಕೆ ಅಪಾರ ಕೊಡುಗೆ ಕೊಟ್ಟಿದ್ದಾರೆ. ಸಾಮಾಜಿಕ, ಆರ್ಥಿಕ , ಮೂಲಭೂತ ಸೌಕರ್ಯಗಳು,ಕೈಗಾರಿಕೆಗಳ ಬೆಳವಣಿಗೆಗೆ ಕಾರಣೀಭೂತಗಿದ್ದಾರೆ. ಅವರ ಕಾಲದಲ್ಲಿ ದಿವಾನರಾಗಿದ್ದವರು ಸಂಘದ ಅಧ್ಯಕ್ಷರಾಗಿದ್ದರು ಎನ್ನುವುದು ಈ ಸಂಘದ ಹೆಗ್ಗಳಿಕೆ ಎಂದರು. ಅವರೆಲ್ಲರೂ ದಕ್ಷ ಆಡಳಿತಕ್ಕೆ ನಮಗೆ ದಾರಿದೀಪ  ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಾಂಗ ಹಾಗೂ ಶಾಸಕಾಂಗ ಒಟ್ಟಾಗಿ ಕೆಲಸ ಮಾಡಬೇಕು. ಈ ಎರಡೂ ಜನರ ಪ್ರತಿನಿಧಿಗಳಾಗಿ ಜನರ ಹಿತವನ್ನು ಕಾಪಾಡುವುದು ನಮ್ಮ ಕರ್ತವ್ಯ. ಅಧಿಕಾರಿಗಳಿಗೆ ಕಾನೂನಿನ ಅರಿವಿನ ಜೊತೆಗೆ ಸಾಮಾನ್ಯ ಜ್ಞಾನ, ಸಮಾಜದ ಬಗ್ಗೆ ಅರಿವು ಇರಬೇಕು. ನಿವೃತ್ತರಾಗುವವರೆಗೆ ಜನಸೇವೆಯಲ್ಲಿ ತೊಡಗಿಸಿಕೊಳ್ಳುವ ಅವಕಾಶವಿದೆ. ಅಸಮಾನತೆ ಇರುವ ಸಮಾಜದಲ್ಲಿ ದುರ್ಬಲ ವರ್ಗಕ್ಕೆ ಸ್ಪಂದಿಸಬೇಕು. ಅಧಿಕಾರಿಗಳಿಗೆ ಕಾನೂನಿನ ಅರಿವಿನ ಜೊತೆಗೆ ಸಾಮಾನ್ಯ ಜ್ಞಾನ, ಸಮಾಜದ ಬಗ್ಗೆ ಅರಿವು ಇರಬೇಕು. ಆಗ ಮಾತ್ರ ಜನರಿಗೆ ಸ್ಪಂದಿಸಲು ಸಾಧ್ಯ ಎಂದು ಹೇಳಿದರು.

ಗ್ರಾಮೀಣ ಜನರನ್ನು ಪ್ರೀತಿಯಿಂದ ಮಾತನಾಡಿಸಿ ಅವರ ಸಮಸ್ಯೆ ಅರ್ಥೈಸಿಕೊಂಡು ಬಗೆಹರಿಸಿದರೆ ಅವರು ನಿಮ್ಮನ್ನು ಮರೆಯುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ. ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ವರ್ಗಾಯಿಸಲಾಗುತ್ತಿದೆ ಎಂದರು.

ಪದೋನ್ನತಿ ಬಗ್ಗೆ ಕಂದಾಯ ಸಚಿವರು ಕಾರ್ಯೋನ್ಮುಖರಾಗಿದ್ದು, ಶ್ರೀಘ್ರವಾಗಿ ಪದೋನ್ನತಿ ಆಗಲಿದೆ. ಶೇ. 33% ಅಧಿಕಾರಿಗಳನ್ನು ಸಿಇಒಗಳಾಗಿ ಬಡ್ತಿ ನೀಡುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದರು.  ಕೆಎಎಸ್ ಅಧಿಕಾರಿಗಳ ಸಂಘದಲ್ಲಿ ಹೆಚ್ಚುವರಿಯಾಗಿ ಹನ್ನೊಂದು ಕೊಠಡಿಗಳನ್ನು ನಿರ್ಮಿಸಿದ್ದು, ಹೊರಭಾಗಗಳಿಂದ ಆಗಮಿಸುವ ಅಧಿಕಾರಿಗಳಿಗೆ ಉಪಯೋಗವಾಗಲಿದೆ ಎಂದದು ತಿಳಿಸಿದರು.

Related Posts

Leave a Reply

Your email address will not be published. Required fields are marked *