ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾದ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾದ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಆರ್ ಆರ್ ನಗರ: ರಾಜರಾಜೇಶ್ವರಿನಗರದ ಜಯಣ್ಣ ವೃತ್ತದಲ್ಲಿ ಶಾಸಕ ಮುನಿರತ್ನ ನೇತೃತ್ವದಲ್ಲಿ ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾದ ಕುಟುಂಬಗಳಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆರ್. ಎಸ್. ಎಸ್. ನ ಹಿರಿಯ ಮುಖಂಡ ಕಲ್ಕಡ ಪ್ರಭಾಕರ್ ಭಟ್ ಭಾಗವಹಿಸಿ ಕಿಟ್ ವಿತರಿಸಿ ನಂತರ ಮಾತನಾಡಿದ ಅವರು ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ರೂಪಿಸಿರುವ ಕಠಿಣ ನಿಯಮದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಕೂಲಿಕಾರ್ಮಿಕರು ಬಡವರು ಮಧ್ಯಮವರ್ಗದವರಿಗೆ ಮಾನವೀಯ ನೆಲೆಯಲ್ಲಿ ಸಹಾಯಹಸ್ತ ಚಾಚುತ್ತಿರುವ ಶಾಸಕ ಮುನಿರತ್ನ ಅವರ ಕಾರ್ಯ ಶ್ಲಾಘನೀಯ ಎಂದರು. ಕೋರೋನಾ ವೈರಸ್ ಮಹಾಮಾರಿ ಸೋಂಕಿನಿಂದ ರಕ್ಷಣೆ ಪಡೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿರವರು ಎಲ್ಲ ವರ್ಗದ ಜನರಿಗೆ ಉಚಿತವಾಗಿ ಅಗತ್ಯ ಲಸಿಕೆ ಪಡೆದುಕೊಳ್ಳುವ ಕಾರ್ಯಕ್ಕೆ ಚಾಲನೆ ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು.ಬಿಬಿಎಂಪಿ ಮಾಜಿ ಸದಸ್ಯ ಜಿ. ಹೆಚ್. ರಾಮಚಂದ್ರ, ಬಿಜೆಪಿ ಮುಖಂಡರಾದ. ಜಗದೀಶ್. ಆರ್. ಚಂದ್ರ, ವಿ. ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

,

Leave a Reply

Your email address will not be published. Required fields are marked *