ಸಿಲಿಕಾನ್ ಸಿಟಿ ಬೆಂಗಳೂರು ಡೆಂಗ್ಯು ಹಾಟ್‌ಸ್ಪಾಟ್ ಆಗುತ್ತಿದ್ದು, ಆತಂಕ ಸೃಷ್ಟಿಸಿದೆ. ಕೋವಿಡ್ ಆತಂಕದ ಮಧ್ಯೆ ರಾಜ್ಯದಲ್ಲಿ ಡೆಂಗ್ಯು ಕೇಸ್‌ಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ರಾಜ್ಯದ ಡೆಂಗ್ಯು ಪ್ರಕರಣಗಳಲ್ಲಿ ಬೆಂಗಳೂರಿನಲ್ಲೇ ಅರ್ಧದಷ್ಟು ಪ್ರಕರಣಗಳಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯ ಕೇಸ್ 700 ದಾಟಿದ್ದು, ಆತಂಕ ಹುಟ್ಟು ಹಾಕಿದೆ.
ಪಾಲಿಕೆ ವ್ಯಾಪ್ತಿಯಲ್ಲಿ 723 ಕೇಸ್‌ಗಳು ವರದಿಯಾಗಿದ್ದು, ನಿಯಂತ್ರನಕ್ಕೆ ಸಿಗದ ಪರಿಸ್ಥಿತಿಯಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ 800 ಕ್ಕೂ ಹೆಚ್ಚು ಡೆಂಗ್ಯು ಪ್ರಕರಣಗಳು ದಾಖಲಾಗಿವೆ.