Menu

ಬಿಎಸ್ ವೈ ವಿರುದ್ಧದ ಡಿನೋಟೀಫಿಕೇಷನ್ ಪ್ರಕರಣ ಸುಪ್ರೀಂ ವಿಸ್ತ್ರತ ಪೀಠಕ್ಕೆ ವರ್ಗಾವಣೆ

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಡಿನೋಟೀಫಿಕೇಷನ್ ಪ್ರಕರಣದ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ವಿಸ್ತ್ರತ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ನ್ಯಾ.ಜೆ.ಬಿ. ಪರ್ದಿವಾಲಾ, ಮನೋಜ್ ಮಿಶ್ರಾ ಪೀಠ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಸೋಮವಾರ ತೀರ್ಪು ಪ್ರಕಟಿಸುವ ನಿರೀಕ್ಷೆ ಇತ್ತಾದರೂ ಅರ್ಜಿ ವಿಚಾರಣೆಯನ್ನು ದ್ವಿಸದಸ್ಯ ಪೀಠದಿಂದ ವಿಸ್ತ್ರತ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ವಿಚಾರಣೆ ನಡೆಸಿರುವ ಕೋರ್ಟ್ ತೀರ್ಪು ನೀಡಿದೆ. ಬೆಂಗಳೂರಿನ ಉದ್ಯಮಿ ಎ.ಆಲಂ ಪಾಷಾ ಅವರು ಯಡಿಯೂರಪ್ಪ ವಿರುದ್ಧ ತಾವು ನೀಡಿರುವ ದೂರನ್ನು ಪುನಸ್ಥಾಪಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ 5 ಜನವರಿ 2021 ರಂದು ಮಾನ್ಯ ಮಾಡಿತ್ತು. ಇದನ್ನು ಪ್ರಶ್ನಿಸಿ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದೀವಾಲಾ ಮತ್ತು ನ್ಯಾ. ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠ ಏಪ್ರಿಲ್ 4ರಂದು ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿದ್ದರು.

ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಮತ್ತು ‘ಕರ್ನಾಟಕ ಉದ್ಯೋಗ ಮಿತ್ರ’ ಸಂಸ್ಥೆಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಕೆ.ಎಸ್ ವಿರುದ್ಧ ಭ್ರಷ್ಟಾಚಾರ ಮತ್ತು ಕ್ರಿಮಿನಲ್ ಸಂಚು ಆರೋಪ ಕೇಳಿಬಂದಿತ್ತು. ದೇವನಹಳ್ಳಿಯಲ್ಲಿ 2011ರಲ್ಲಿ26 ಎಕರೆ ಡಿನೋಟಿಫಿಕೇಷನ್ ಮಾಡಿ ಅಕ್ರಮ ನಡೆಸಲಾಗಿದೆ ಎಂದು ಆರೋಪಿಸಿ ಆಲಂ ಪಾಷಾ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಯಡಿಯೂರಪ್ಪ ಹಾಗೂ ನಿರಾಣಿ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ 2021ರ ಜನವರಿ 27ರಂದು ಆದೇಶ ನೀಡಿತ್ತು.

Related Posts

Leave a Reply

Your email address will not be published. Required fields are marked *