Menu

ಮಥುರಾದಲ್ಲಿ ಒಂದೇ ಕುಟುಂಬದ ಐವರು ಸುಸೈಡ್‌

ಉತ್ತರ ಪ್ರದೇಶದ ಮಥುರಾದಲ್ಲಿ ಒಂದೇ ಕುಟುಂಬ ಐವರು ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಪತಿ, ಪತ್ನಿ ಮತ್ತು ಮೂವರು ಮಕ್ಕಳು ರಾತ್ರಿ ಹಾಲಿಗೆ ವಿಷ ಬೆರೆಸಿ ಕುಡಿದಿದ್ದಾರೆ ಎನ್ನಲಾಗಿದೆ. ಮಹಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಖಪ್ಪರ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಮನೆಯವರು ಬೆಳಗ್ಗೆ ಎಚ್ಚರಗೊಳ್ಳದಿದ್ದಾಗ ಪಕ್ಕದ ಮನೆಯವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದುರಂತ ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರನ್ನು

ಸತ್ಯ ಎದುರಿಸಲಾಗದ ಹೇಡಿತನ, ಸಂಸತ್‌ಗೆ ಅಗೌರವ ತೋರಿದ ಪ್ರಧಾನಿ ಮೋದಿ: ಸಿಎಂ ಸಿದ್ದರಾಮಯ್ಯ

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ನೀಡದೆ ತಪ್ಪಿಸಿಕೊಂಡಿರುವುದು ಸಂಸತ್‌ಗೆ ತೋರಿಸಿರುವ ಅಗೌರವ ಮಾತ್ರವಲ್ಲ ಸತ್ಯವನ್ನು ಎದುರಿಸಲಾಗದ ಹೇಡಿತನವೂ ಆಗಿದೆ‌. ಭಾರತದ ಸಂಸತ್ತಿನ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನ ಮಂತ್ರಿಯವರ ಉತ್ತರ ಇಲ್ಲದೆ

ಕೆನಡಾದಲ್ಲಿ ಗುಂಡಿನ ದಾಳಿಗೆ ಬೆಂಗಳೂರಿನ ಯುವಕ ಬಲಿ

ಕೆನಡಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಬೆಂಗಳೂರಿನ ನೆಲಮಂಗಲ ಚಂದನ್ ಕುಮಾರ್(37) ಎಂಬವರು ಪ್ರಾಣ ಕಳೆದುಕೊಂಡಿದ್ದಾರೆ. ಚಂದನ್ ಕುಮಾರ್ ಬೆಂಗಳೂರಿನ ನೆಲಮಂಗಲ ತ್ಯಾಮಗೊಂಡ್ಲುವಿನ ನಿವಾಸಿ. ಆರು ವರ್ಷಗಳಿಂದ ಚಂದನ್ ಕುಮಾರ್ ಕೆನಡಾದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ರಾತ್ರಿ ಕಾರಿನಲ್ಲಿ ತೆರಳುತ್ತಿದ್ದಾಗ ಚಂದನ್

ಪಬ್‌ಜಿ ಆಡುತ್ತಿದ್ದವನಿಗೆ ರಕ್ತದೊತ್ತಡ ಹೆಚ್ಚಿ ಕುಸಿದು ಸಾವು

ಪಬ್‌ಜಿ ಗೇಮ್ ಆಡುತ್ತಿರುವಾಗಲೇ ರಕ್ತದೊತ್ತಡ ಹೆಚ್ಚಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಮೊಹಮ್ಮದ್ ಕೈಫ್ (22) ಮೃತಪಟ್ಟವ. ಖೈರ್‌ನಗರದ ಗುಲಾರ್ ವಾಲಿ ಗಾಲಿಯ ನಿವಾಸಿಯಾಗಿರುವ ಪ್ರಾಪರ್ಟಿ ಡೀಲರ್ ಫಾರುಕ್ ಎಂಬವರ ಪುತ್ರ ಕೈಫ್ ಕಳೆದ ನಾಲ್ಕು ತಿಂಗಳಿನಿಂದ

ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ವಿರೋಧಿಸಿ ಫೆ.12ರಂದು ಪ್ರತಿಭಟನೆ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ ಸಂಯುಕ್ತ ಕಿಸಾನ್‌ ಮೋರ್ಚಾ ಸೇರಿ ಹಲವು ಸಂಘಟನೆಗಳು ಫೆ.12ರಂದು ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿವೆ. ಭಾರತ ಸರ್ಕಾರವು ರೈತರ ಹಿತರಕ್ಷಣೆ ಮಾಡಲಿದ್ದೇವೆ ಎಂದು ಭರವಸೆ ಕೊಟ್ಟಿದ್ದು, ಈ ಒಪ್ಪಂದವು ಅಮೆರಿಕದ

ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ದೇಶದ 72 ಕೋಟಿ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ ಮುಖ್ಯವಾಗಿ ದೇಶದ 72 ಕೋಟಿ ರೈತರ

ಮಲೇಷ್ಯಾದಲ್ಲಿ ಭಾರತೀಯ ರಾಯಭಾರ ಕಚೇರಿ

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಮಲೇಷ್ಯಾ ಭೇಟಿ ವೇಳೆ ಮಲೇಷ್ಯಾದಲ್ಲಿ ಭಾರತೀಯ ರಾಯಭಾರ ಕಚೇರಿ ತೆರೆಯುವುದು ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಕ್ಷೇತ್ರಗಳಲ್ಲಿ ಉಭಯದೇಶಗಳ ಸಹಕಾರದೊಂದಿಗೆ ಹಲವು ಉಪಕ್ರಮಗಳನ್ನು ಘೋಷಿಸಲಾಗಿದೆ. ಪ್ರಧಾನಿ ಮೋದಿ ಅಲ್ಲಿಯ ಪ್ರಧಾನಿ ದಾತು ಸೆರಿ ಅನ್ವರ್ ಇಬ್ರಾಹಿಂ

ಉಡುಪಿಯ ಯುವಕ ಅಬುಧಾಬಿಯಲ್ಲಿ ಖರೀದಿಸಿದ ಟಿಕೆಟ್‌ಗೆ ಬಂತು 49 ಕೋಟಿ ರೂ.

ಉಡುಪಿಯ ಯುವಕನೊಬ್ಬ ಸ್ನೇಹಿತನೊಂದಿಗೆ ಸೇರಿ ಖರೀದಿಸಿದ ಅಬುಧಾಬಿಯ ಲಕ್ಕಿ ಡ್ರಾನಲ್ಲಿ 49 ಕೋಟಿ ರೂ. ಬಹುಮಾನ ಲಭಿಸಿದೆ. ಕಾಪು ತಾಲೂಕು ಕಟಪಾಡಿ ಮಟ್ಟು ಮೂಲದ ಶಾಂತನು ಶೆಟ್ಟಿಗಾರ್ ಬಹುಮಾನ ವಿಜೇತರಾಗಿದ್ದು, 20 ಮಿಲಿಯನ್ ದಿರಮ್‌ ಬಹುಮಾನ ಸಿಕ್ಕಿದೆ. ಅಬುಧಾಬಿಯಲ್ಲಿ ಬಿಗ್ ಟಿಕೆಟ್

ಕಲ್ಲಂಗಡಿ ಹಣ್ಣನ್ನು ಸಾಗಿಸುತ್ತಿದ್ದ ಟ್ರಕ್​ನಲ್ಲಿ ಸ್ಫೋಟಕಗಳು ಪತ್ತೆ

ಕೇರಳದ ವಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣನ್ನು ಸಾಗಿಸುತ್ತಿದ್ದ ಟ್ರಕ್​ನಲ್ಲಿ ಸ್ಫೋಟಕಗಳು ಪತ್ತೆಯಾವೆ. ತಮಿಳುನಾಡಿನ ಧರ್ಮಪುರಿಯ ಪಾಪರಪಟ್ಟಿಯ ಲಾರಿ ಚಾಲಕ ಸೆಂಥಿಲ್ ಕುಮಾರ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, 100ಕ್ಕೂ ಹೆಚ್ಚು ಪೆಟ್ಟಿಗೆಗಳಲ್ಲಿ ಇದ್ದ ಜಿಲೆಟಿನ್ ಹಾಗೂ ಸ್ಪೋಟಕಗಳನ್ನು ಜಪ್ತಿ ಮಾಡಿದ್ದಾರೆ. ಪಾಲಕ್ಕಾಡ್

ದೆಹಲಿಯಲ್ಲಿ ಖಲಿಸ್ತಾನ್ ಪರ ಘೋಷಣೆ: ಖಲಿಸ್ತಾನಿ ಉಗ್ರರ ಸಂಪರ್ಕದಲ್ಲಿರುವ ಇಬ್ಬರ ಬಂಧನ

ನಿಷೇಧಿತ ಸಿಖ್ಸ್ ಫಾರ್ ಜಸ್ಟೀಸ್‌ನ ಮುಖ್ಯಸ್ಥ ಕೆನಡಾದಲ್ಲಿರುವ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್‌ಗೆ ಸಂಬಂಧಿಸಿದ ಸ್ಲೀಪರ್ ಸೆಲ್‌ನೊಂದಿಗೆ ಸಂಪರ್ಕವಿರುವ ಇಬ್ಬರು ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಗಣರಾಜ್ಯೋತ್ಸವಕ್ಕೆ ಮೊದಲು ದೆಹಲಿಯಲ್ಲಿ ಖಲಿಸ್ತಾನ್ ಪರ ಘೋಷಣೆಗಳನ್ನು ಬರೆದು ಸಾರ್ವಜನಿಕ ಸುವ್ಯವಸ್ಥೆಯನ್ನು ಭಂಗಗೊಳಿಸುವ